ಲವರ್‌ ಜತೆಗೂಡಿ ತಮ್ಮನನ್ನೇ ಕೊಲೆ ಮಾಡಿ ಶವದ ಮುಂದೆ ಗೋಳೋ ಎಂದು ಅತ್ತ ಹುಬ್ಬಳ್ಳಿ ಹೆಣ್ಣು!

blank
blank

ಹುಬ್ಬಳ್ಳಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆಗೆ ಸೇರಿ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕಳೆದ ಎರಡೂ ದಿನಗಳ ಹಿಂದೆ ನಡೆದ ಕೊಲೆ ಪ್ರಕರಣ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ.

ಅಕ್ಕ ಮತ್ತು ಪ್ರಿಯಕರ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ 48 ಗಂಟೆಯಲ್ಲಿಯೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರಿ ಬಸವ್ವ ನರಸಣ್ಣವರ, ಚನ್ನಪ್ಪ ಮರೆಪ್ಪಗೌರಡ ಕೊಲೆ ಆರೋಪ ಎದುರಿಸುತ್ತಿದ್ದಾರೆ.

ಕೊಲೆ ಆರೋಪಿಗಳಿಗೆ ಅನೈತಿಕ ಸಂಬಂಧವಿತ್ತು. ಇದಕ್ಕೆ ಶಂಭುಲಿಂಗ ಕಮಡೊಳ್ಳಿ ಅಡ್ಡಪಡಿಸಿದ್ದರು. ಇದೇ ಕಾರಣಕ್ಕೆ ಅಕ್ಕ ತಮ್ಮನ ಕೊಲೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಕೊಲೆಯಾದ ಬಳಿಕ ಸಹೋದರನ ಶವದ ಎದುರು ಕುಳಿತು ಕಣ್ಣೀರು ಹಾಕಿ ನಾಟಕವಾಡಿದ್ದಳು. ಕೊಲೆಯ ಬಳಿಕ ಚನ್ನಪ್ಪ ಮರೆಪ್ಪಗೌಡರ ಪರಾರಿಯಾಗಿದ್ದ. ಚನ್ನಪ್ಪ ಮರೆಪ್ಪಗೌಡರ ಕೊಲೆಯಾದ ಶಂಭುಲಿಂಗನ ಸ್ನೇಹಿತ ಎಂದು ಪೊಲೀಸರು ಹೇಳಿದ್ದಾರೆ. ತನಿಖೆ ಮುಂದುವರೆದಿದೆ.

ಮತ್ತೋರ್ವ ನಟಿಯ ನಿಗೂಢ ಸಾವು- ಇನ್‌ಸ್ಟಾದಲ್ಲಿ ಖುಷಿ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ನೇಣು! ಬಾಯ್‌ಫ್ರೆಂಡ್‌ ಜತೆ ಆದದ್ದೇನು?

ಮೈಸೂರಿನ ನಾಟಿ ವೈದ್ಯನ ಬರ್ಬರ ಕೊಲೆ ರಹಸ್ಯ ಬಯಲು! ದರೋಡೆ ಕೇಸ್ ದಾಖಲಿಸಲು ಬಂದು ಸಿಕ್ಕಿಬಿದ್ದ ಕೊಲೆಗಾರ

Share This Article

ಪೈಲ್ಸ್​ ಇರುವವರು ಈ ಆಹಾರಗಳನ್ನು ಬಿಟ್ಟುಬಿಡಿ! ಸಮಸ್ಯೆಯಿಂದ ಹೊರಬರಲು ಇಲ್ಲಿವೆ ಉಪಯುಕ್ತ ಸಲಹೆ | Piles

Piles: ಮೂಲವ್ಯಾಧಿ ಅಥವಾ ಪೈಲ್ಸ್​ ಸಮಸ್ಯೆ ಬಹುಜನರಲ್ಲಿ ಕಾಡುವ ತೀರ ಸಾಮಾನ್ಯ ರೋಗ. ಅದರಲ್ಲೂ ಇಂದಿನ…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ! ಯಾವ ಆರೋಗ್ಯ ಸಮಸ್ಯೆನೂ ಬರಲ್ಲ.. curry leaves water

ಬೆಂಗಳೂರು: ( curry leaves water )  ನೀವು ಕೂಡ ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು…