

ಮಂಡ್ಯ: ನಟ ಜೈಜಗದೀಶ್ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ ತಿಳಿದುಬಂದಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಇದೇ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.