More

    ಅನುಮತಿಯಿಲ್ಲದೇ ಸಿಬಿಐಗೆ ನೋ ಎಂಟ್ರಿ ಎಂದ ಮಹಾರಾಷ್ಟ್ರ

    ಮುಂಬೈ: ಇನ್ನು ಮುಂದೆ ಯಾವುದೇ ಪ್ರಕರಣದ ತನಿಖೆಗಾಗಿ ಸಿಬಿಐ ಮಹಾರಾಷ್ಟ್ರವನ್ನು ಪ್ರವೇಶಿಸಿಸುವುದಕ್ಕೂ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಆದೇಶಿಸಿದ್ದಾರೆ.

    ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ನಕಲಿ ಟಿಆರ್‌ಪಿ ಹಗರಣಗಳ ತನಿಖೆಯಲ್ಲಿ ಸಿಬಿಐ ಮಧ್ಯಪ್ರವೇಶದ ಬಳಿಕ ಇಂಥದ್ದೊಂದು ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐ ಅಧಿಕಾರಿಗಳು ಸರ್ಕಾರದ ಅನುಮತಿ ಇಲ್ಲದೆ ಪ್ರವೇಶಿಸಬಹುದೆಂಬ ಈ ಹಿಂದೆ ಇದ್ದಂಥ ಒಪ್ಪಿಗೆಯನ್ನು ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ.

    1946ರ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಅಡಿಯಲ್ಲಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಕೈಲಾಸ್ ಗಾಯಕ್ವಾಡ್‌ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. 1989ರ ಫೆಬ್ರವರಿಯಲ್ಲಿ ಸಿಬಿಐಗೆ ರಾಜ್ಯ ಸರ್ಕಾರ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಪ್ರಕರಣದ ತನಿಖೆ ಆರಂಭಿಸುವ ಮೊದಲು ಸರ್ಕಾರದ ಒಪ್ಪಿಗೆ ಪಡೆಯುವುದು ಅಗತ್ಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಭವಿಷ್ಯದ ಪ್ರಕರಣಗಳಿಗೆ ಈ ನಿರ್ಧಾರ ಅನ್ವಯವಾಗಲಿದೆಯಾದರೂ, ಈಗಾಗಲೇ ಸಿಬಿಐ ಕೈಗೊಂಡಿರುವ ಪ್ರಕರಣಗಳಿಗೆ ಈ ನಿರ್ಧಾರದಿಂದ ಯಾವುದೇ ಪರಿಣಾಮವಾಗದು ಎಂದು ಹೇಳಲಾಗುತ್ತಿದೆ.

    ಇದನ್ನೂ ಓದಿ: ಯೋಗಿ ರಾಜ್ಯದಲ್ಲಿ ಅಪರಾಧಿಗಳಿಗೆ ನಡುಕ- 125 ಎನ್​ಕೌಂಟರ್​, 14 ಗಲ್ಲು, 24 ಗಂಟೆಗಳಲ್ಲಿ 23 ಜೀವಾವಧಿ!

    ಟಿಆರ್‌ಪಿ ಅಕ್ರಮ ಪ್ರಕರಣದ ಸಂಬಂಧ ಉತ್ತರ ಪ್ರದೇಶದ ಲಖನೌನ ಹಝರತ್‌ಗಂಜ್‌ ಪೊಲೀಸ್‌ ಠಾಣೆಯಲ್ಲಿ ಜಾಹೀರಾತು ಏಜೆನ್ಸಿಯೊಂದು ದೂರು ದಾಖಲು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸೇರಿದಂತೆ ಮೂರು ಚಾನೆಲ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿಯೂ ದೂರು ದಾಖಲಾಗಿದ್ದು, ಯೋಗಿ ಆದಿತ್ಯನಾಥ್ ಸರ್ಕಾರ ಅದರ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಅದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐ ಅನ್ನು ನಿರ್ಬಂಧಿಸುವ ನಿರ್ಧಾರ ಕೈಗೊಂಡಿದೆ.

    ಇನ್ನು, ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರು ನಡೆಸಿದ ತನಿಖೆ ತೀವ್ರ ಟೀಕೆಗೆ ಗುರಿಯಾದ ನಂತರ ಸುಪ್ರೀಂಕೋರ್ಟ್ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು.

    ಹೊಸ ಲವರ್​ಗೆ ಗ್ರಹಚಾರ ತಂದಿಟ್ಟ ಪ್ರೇಯಸಿ- ಸಾಗರದ ಡಬಲ್​ ಮರ್ಡರ್​ ಕೇಸ್​ ಭೇದಿಸಿದ ಪೊಲೀಸರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts