More

    ಕಣ್ಣಲ್ಲಿ ಕಣ್ಣಿಟ್ಟು ಕಾಯ್ತಿದ್ರೂ ಸಿಕ್ತಿಲ್ಲ ಚಿರತೆ: ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ

    ಬೆಳಗಾವಿ: ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

    ಗಾಲ್ಫ್ ಮೈದಾನದ ಸಮೀಪ 22 ಶಾಲೆಗಳು ಇದ್ದು, ಇವುಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

    ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ, ಸಹ್ಯಾದ್ರಿ ನಗರ, ದೂರದರ್ಶನ ಕೇಂದ್ರ, ಕ್ಯಾಂಪ್ ಪ್ರದೇಶ ಹಿಂಡಲಗಾ ಹಾಗೂ ವಿಜಯನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ಆಗಸ್ಟ್ 5ರ ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತ್ತು. ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿತ್ತು. ಮೂರು ದಿನಗಳು ಕಳೆದರೂ ಅದು ಪತ್ತೆಯಾಗಲಿಲ್ಲ. ಗಾಲ್ಫ್ ಮೈದಾನದಲ್ಲಿ ಚಿರತೆ ಮರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಚಿರತೆಯನ್ನು ಹಿಡಿಯುವುದಕ್ಕಾಗಿ 7 ಬೋನು ಇರಿಸಿ, 16 ಟ್ರ್ಯಾಪ್ ಕ್ಯಾಮರಾ ಅಳವಡಿಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

    ರಕ್ಷಣಾ ಇಲಾಖೆಗೆ ಸೇರಿದ 250 ಎಕರೆ ಪ್ರದೇಶದಲ್ಲಿ ಚಿರತೆ ಇರುವ ಶಂಕೆ ಇದ್ದು, 50ಕ್ಕೂ ಹೆಚ್ಚು ಸಿಬ್ಬಂದಿಯಿಂದ ಚಿರತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಶಾಲೆಗೆ ರಜೆ ಘೋಷಿಸಿದ್ದಾರೆ (ದಿಗ್ವಿಜಯ ನ್ಯೂಸ್​).

    ಗುಜರಾತ್​ನಲ್ಲಿ ಕಾಂಗ್ರೆಸ್​-ಬಿಜೆಪಿ ನಡುವೆ ಸೀಕ್ರೆಟ್​ ಲವ್​ , ಎರಡೂ ಶೀಘ್ರವೇ ವಿಲೀನ: ಬಾಂಬ್​ ಸಿಡಿಸಿದ ಕೇಜ್ರಿವಾಲ್​

    ಟ್ಯಾಟೂ ಪ್ರಿಯರೇ ಎಚ್ಚರ… ಹಚ್ಚೆ ಹಾಕಿಸಿಕೊಂಡವರಿಗೆ ಎಚ್​ಐವಿ ಸೋಂಕು- ಆಗಿದ್ದು ಹೀಗೆ..

    ಪತ್ನಿ ಹೆಸರಿಗೆ ಮಾಡಿಸಿದ 35 ಲಕ್ಷ ರೂ. ವಿಮೆ: ಕೊಲ್ಲಲು ನೀಡಿದ ಐದು ಲಕ್ಷ ರೂ- ಭಯಾನಕ ಮರ್ಡರ್​ ಕೇಸ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts