More

    ಕಲ್ಲಿದ್ದಲು ಹಗರಣ: ಕೇಂದ್ರದ ಮಾಜಿ ಸಚಿವ ರೇ ಅಪರಾಧಿ ಎಂದ ಕೋರ್ಟ್​

    ರಾಂಚಿ: 1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಇಂದು ಘೋಷಿಸಿದೆ.

    ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು.

    ದಿಲೀಪ್​ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್​ವಾಲ್​ ಅವರೂ ದೋಷಿ​​ಗಳೆಂದು ಆದೇಶಿಸಲಾಗಿದೆ.

    ಇದನ್ನೂ ಓದಿ: ಬಿಜೆಪಿ ಯುವ ಮುಖಂಡ ರವಿಕಾಂತ ನಾಯ್ಕೋಡಿ ಮೇಲೆ ಹಲ್ಲೆ: ತಲವಾರ ಬೀಸಿ ಕೊಲೆಗೆ ಯತ್ನ

    ಅಕ್ಟೋಬರ್ 14 ರಂದು ಹಗರಣ ಸಂಬಂಧ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭಾರತ್ ಪರಾಶರ್, ಶಿಕ್ಷೆಯ ಪ್ರಮಾಣ ಘೋಷಿಸಲಿದ್ದಾರೆ.

    ಜಾರ್ಖಂಡ್‌ನ ಗಿರಿದಿಹ್​ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999ರಲ್ಲಿ ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್​ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ.  ಜಾರ್ಖಂಡ್ ಕಲ್ಲಿದ್ದಲು ಗಣಿ ಮತ್ತು ನಿಕ್ಷೇಪಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರೀ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿತ್ತು.

    ಮಗಳಿಗೆ ಮಕ್ಕಳಾಗಿಲ್ಲವೆಂದು ಅಪ್ಪ ಕಳ್ಳನಾಗೋದಾ? ನಂಜನಗೂಡಲ್ಲೊಂದು ವಿಚಿತ್ರ ಘಟನೆ

    ಅತ್ಯಾಚಾರದ ವಿರುದ್ಧ ದೂರು ದಾಖಲಿಸಲು 800 ಕಿ.ಮೀ ದೂರ ಧಾವಿಸಿದ ಯುವತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts