More

    ಕಾಂಗ್ರೆಸ್‌ ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು

    ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ.

    ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

    ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ ನಡೆದಿತ್ತು. ಈ ಸಂದರ್ಭದಲ್ಲಿ ಪಾರ್ಥಿವ ಶರೀರ ನೋಡಲು ಹಾಗೂ ಅಂತ್ಯ ಸಂಸ್ಕಾರದಲ್ಲಿ ಅನೇಕ ಜನರು ನಿಯಮ ಉಲ್ಲಂಘಿಸಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಅಂತರ ಕಾಪಾಡಿರಲಿಲ್ಲ ಹಾಗೂ ಮಾಸ್ಕ್ ಕೂಡ ಧರಿಸಿರಲಿಲ್ಲ. ಈ ಕಾರಣದಿಂದ ದೂರು ದಾಖಲಿಸಲಾಗಿದೆ ಎಂದು ಗದಗನ ಶಹರ ಪೊಲೀಸ ಠಾಣೆ ಪೊಲೀಸರು ಹೇಳಿದ್ದಾರೆ.

    ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ

    ಸಂಸದೆಗೆ ಟೈಟ್‌ ಪ್ಯಾಂಟ್‌ ತಂದ ಫಜೀತಿ- ಸಂಸತ್ತಿನ ಒಳಗೆ ಹೋಗ್ತಿದ್ದಂತೆಯೇ ಶುರುವಾಯ್ತು ಪ್ರತಿಭಟನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts