

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಅಮಿತ್ ಷಾ ಟ್ವೀಟ್ ಮಾಡಿದ್ದು, ತಮಗೆ ಸೋಂಕು ದೃಢಪಟ್ಟಿರುವುದಾಗಿ ಹೇಳಿದ್ದಾರೆ.
ನನಗೆ ಕರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ನಾನು ಪರೀಕ್ಷೆ ಮಾಡಿಸಿಕೊಂಡಿದ್ದೆ. ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.
ಇದೇ ವೇಳೆ ಮುಂಜಾಗರೂಕತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಹೇಳಿದ್ದಾರೆ.