ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಕರೊನಾ ಸೋಂಕಿತೆ!

corona positive
Published on

ಗೋರಖ್‌ಪುರ (ಉತ್ತರ ಪ್ರದೇಶ): ಗೋರಖ್​ಪುರ ಜಿಲ್ಲೆಯ ಬಿಆರ್​ಡಿ ವೈದ್ಯಕೀಯ ಕಾಲೇಜಿನಲ್ಲಿ ಕರೊನಾ ಸೋಂಕಿತೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ನಾಲ್ಕೂ ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದು, ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ. ತಾಯಿ ಕೂಡ ಆರೋಗ್ಯದಿಂದ ಇದ್ದಾರೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಕುಮಾರ್ ಹೇಳಿದ್ದಾರೆ.

ತುಂಬು ಗರ್ಭಿಣಿಯಾಗಿದ್ದ ಡಿಯೋರಿಯಾ ಜಿಲ್ಲೆಯ ಗೌರಿ ಬಜಾರ್ ನಿವಾಸಿ 26 ವರ್ಷದ ಮಹಿಳೆ ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕಳೆದ ಮಂಗಳವಾರ ರಾತ್ರಿ ಇಲ್ಲಿ ಭೇಟಿ ನೀಡಿದ್ದಾರೆ. ಪರೀಕ್ಷೆ ಮಾಡಿದಾಗ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಅಲ್ಲಿಯೇ ಕರೊನಾಕ್ಕೂ ಚಿಕಿತ್ಸೆ ನೀಡಿ, ಸುರಕ್ಷಿತವಾಗಿ ಹೆರಿಗೆಯನ್ನೂ ಮಾಡಿಸಲಾಗಿದೆ. ನಾಲ್ಕು ಶಿಶುಗಳ ತೂಕ 980 ಗ್ರಾಂನಿಂದ 1.5 ಕೆಜಿ ನಡುವೆ ಇದೆ.

ಇದೊಂದು ಅಪರೂಪದ ಪ್ರಕರಣವಾಗಿದ್ದು, ಹೆರಿಗೆ ಮಾಡಿಸುವುದು ಸವಾಲಿನ ಕೆಲಸವಾಗಿತ್ತು. ಆದಾಗ್ಯೂ, ತಾಯಿ ಮಗು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net