More

    ತಮಿಳುನಾಡಿನ ರಾಜ್ಯಪಾಲರಿಗೆ ಕರೊನಾ ಸೋಂಕು: ಆಸ್ಪತ್ರೆಗೆ ದಾಖಲು

    ಚೆನ್ನೈ: ಇತ್ತೀಚೆಗೆ ಹೋಮ್​​ ಕ್ವಾರಂಟೈನ್​​ನಲ್ಲಿದ್ದ ತಮಿಳುನಾಡು ರಾಜ್ಯಪಾಲ ಭನ್ವರಿಲಾಲ್‌ ಪುರೋಹಿತ್‌ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಕಳೆದ ವಾರ ತಮಿಳುನಾಡು ರಾಜಭವನದ 84 ಸಿಬ್ಬಂದಿ ಸೋಂಕಿಗೆ ಒಳಗಾಗಿರುವ ವರದಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜುಲೈ 29ರಿಂದ ರಾಜ್ಯಪಾಲರು ರಾಜಭವನದಲ್ಲೇ ಹೋಮ್​​ ಕ್ವಾರಂಟೈನ್​​​ಗೆ ಒಳಗಾಗಿದ್ದರು. ಈಗ ಆರೋಗ್ಯದಲ್ಲಿ ದಿಢೀರ್​ ಏರುಪೇರಾಗಿದ್ದರಿಂದ​​​ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

    81 ವರ್ಷಗಳ ಭನ್ವರಿಲಾಲ್‌ ಅವರು ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸದ್ಯ ಅವರು ಆರೋಗ್ಯದಿಂದ ಇದ್ದಾರೆ. ಹೋಮ್‌ ಐಸೋಲೇಷನ್‌ಗೆ ತಿಳಿಸಲಾಗಿದೆ. ವೈದ್ಯರ ತಂಡವೊಂದು ಇವರ ಆರೋಗ್ಯವನ್ನು ನಿರಂತರ ತಪಾಸಣೆ ಮಾಡಲಿದೆ ಎಂದು ವೈದ್ಯರು ಹೇಳಿದ್ದಾರೆ.

    ಇದನ್ನೂ ಓದಿ: ಕರೊನಾ ಪಾಸಿಟಿವ್‌: ಅಮಿತ್‌ ಷಾ ಆಸ್ಪತ್ರೆಗೆ- ಏನು ಹೇಳಿದ್ದಾರೆ ಕೇಳಿ…

    ಜುಲೈ 23ರಂದು ರಾಜ್ಯಪಾಲರ ಕಚೇರಿ 23 ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಜುಲೈ 29ರಂದು ಮೂವರಲ್ಲಿ ಕರೊನಾ ಕಾಣಿಸಿಕೊಂಡಿತ್ತು. ಈ ಪೈಕಿ ಯಾರೂ ರಾಜ್ಯಪಾಲರ ಸಂಪರ್ಕಕ್ಕೆ ಬಂದಿರಲಿಲ್ಲ ಎಂದು ರಾಜಭವನದ ಮೂಲಗಳು ಹೇಳಿವೆ.

    ಈ ಮೊದಲು ಬಿಡುಗಡೆ ಮಾಡಿದ್ದ ವರದಿಯಲ್ಲಿ, ರಾಜ್ಯಪಾಲರಿಗೆ ಪರೀಕ್ಷೆ ಮಾಡಲಾಗಿದ್ದು, ಅವರ ಆರೋಗ್ಯ ಚೆನ್ನಾಗಿದೆ, ಸೋಂಕು ತಗುಲಿರುವ ಬಗ್ಗೆ ವರದಿಯಿಲ್ಲ. ಆದರೂ ಸುರಕ್ಷತಾ ದೃಷ್ಟಿಯಿಂದ ಅವರಿಗೆ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಹೇಳಲಾಗಿದೆ ಎನ್ನಲಾಗಿತ್ತು. ಅವರು ಯಾವುದೇ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕು ತಗಲುವ ಸಾಧ್ಯತೆ ಇಲ್ಲ ಎಂದೇ ಹೇಳಲಾಗುತ್ತಿತ್ತು.

    ಆದರೆ ಇದೀಗ ದಿಢೀರ್‌ ಅಗಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಪರೀಕ್ಷೆ ಮಾಡಿದಾಗ ಪಾಸಿಟಿವ್‌ ಬಂದಿದೆ. (ಏಜೆನ್ಸೀಸ್‌)

    ಕಾಂಗ್ರೆಸ್‌ ಮುಖಂಡನ ಫೋನ್‌ನಿಂದ ಅಶ್ಲೀಲ ಫೋಟೋ ಹರಿದಾಟ- ಅಲ್ಲೋಲ ಕಲ್ಲೋಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts