More

    ಅಮೆರಿಕಕ್ಕೆ ಹೋಗಬಯಸುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಕೋವಿಡ್‌ ಲಸಿಕೆ ಕಡ್ಡಾಯವಲ್ಲ

    ವಾಷಿಂಗ್ಟನ್‌: ವಿದೇಶಗಳಿಗೆ ಹೋಗುವವರಿಗೆ ಲಸಿಕೆಯನ್ನು ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಂಡರಷ್ಟೇ ತಮ್ಮ ದೇಶಕ್ಕೆ ಪ್ರವೇಶ ಎಂದು ಅಮೆರಿಕ ಸೇರಿದಂತೆ ಹಲವು ದೇಶಗಳು ಇದಾಗಲೇ ಘೋಷಣೆ ಮಾಡಿವೆ.
    ಆದರೆ ಇದೀಗ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಿರುವ ಅಮೆರಿಕ, ಭಾರತೀಯ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಬರುವುದಾದರೆ ಲಸಿಕೆ ಕಡ್ಡಾಯವಲ್ಲ ಎಂದು ಹೇಳಿದೆ. ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಮಾಹಿತಿ ನೀಡಿದ್ದಾರೆ.

    ನಮ್ಮ ದೇಶಕ್ಕೆ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸಲು ವ್ಯಾಕ್ಸಿನೇಷನ್ ಕಡ್ಡಾಯವಲ್ಲ ಎಂದು ವಕ್ತಾರ ತಿಳಿಸಿದ್ದರೆ, ಅಲ್ಲಿಯ ಕೆಲವು ಪ್ರಮುಖ ಶಿಕ್ಷಣ ಸಂಸ್ಥೆಗಳು ಲಸಿಕೆ ಕಡ್ಡಾಯ ಎಂದು ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಸ್ವಲ್ಪ ಕನ್‌ಫ್ಯೂಷನ್‌ ಏರ್ಪಟ್ಟಿದ್ದು, ಈ ಬಗ್ಗೆ ಗೊಂದಲವನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಕರೊನಾ ಲಸಿಕೆಯನ್ನು ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡದೇ ಇರಲು ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದು ಎಂದು ವಕ್ತಾರರು ಹೇಳಿದ್ದಾರೆ.

    ಜನವರಿ 26 ರಿಂದ ಅಮೆರಿಕಕ್ಕೆ ಬರುವ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಪ್ರಯಾಣಿಕರು ಕರೊನಾ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ. ಕರೊನಾ ಸೋಂಕಿನಿಂದ ಗುಣಮುಖರಾಗಿದ್ದರೆ ಅದರ ವರದಿ ಹೊಂದಿರಬೇಕು ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.

    ಕ್ಯಾಲೆಂಡರ್‌ಗೋಸ್ಕರ ಪುನಃ ಟಾಪ್‌ಲೆಸ್‌ ಆದ ನಟಿ- ಹಾಟ್‌ ಫೋಟೋಗಳು ವೈರಲ್‌

    ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪತಿ ಮೃತಪಟ್ಟಿದ್ದು, ಮತ್ತೊಂದು ವಿವಾಹವಾಗಿದ್ದೇನೆ- ಮೊದಲ ಗಂಡನ ಆಸ್ತಿ ನನಗೆ ಸಿಗುತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts