More

    ಮೇ 16ರಂದು ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ: ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ. ವಾಯುಭಾರತ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಮೇ 16ರಂದು ರಾಜ್ಯದಲ್ಲಿ ಚಂಡಮಾರುತ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ಕರಾವಳಿಯ ಉಡುಪಿ, ದಣ ಕನ್ನಡ, ಉತ್ತರ ಕನ್ನಡ, ಮೇ 12, 13, 15ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ. ಅಲ್ಲದೆ, ಮೇ 16ರಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್​ ಅರ್ಲಟ್​ ಘೋಷಿಸಲಾಗಿದೆ.

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್​.ಪಾಟೀಲ್​ ಮಾಹಿತಿ ನೀಡಿದರು.

    ಪಶ್ಚಿಮ ಬಂಗಾಳದಲ್ಲಿ ಶೂಟ್‌ಔಟ್‌: ಟಿಎಂಸಿ ಮುಖಂಡ ನಿಯೋಗಿ ಬರ್ಬರ ಹತ್ಯೆ

    ಕೋವಿಡ್‌ ನಿಯಮ ಉಲ್ಲಂಘಿಸಿ ವಾಹನ ಬಳಸಿ ಕ್ಯಾರೇ ಅನ್ನದೇ ತಿರುಗಾಟ – ಪಪ್ಪೂ ಅರೆಸ್ಟ್‌

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts