ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದಾವಣಗೆರೆ ಕಾಮುಕನಿಗೆ 20 ವರ್ಷ ಜೈಲು

rape
Published on

ದಾವಣಗೆರೆ: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ದಾವಣಗೆರೆಯ ಇಮಾಂ ನಗರದ ನಿವಾಸಿ ಸಾದಿಕ್ ಎಂಬಾತನಿಗೆ ಸೆಷನ್ಸ್​ ಕೋರ್ಟ್​ 20 ವರ್ಷಗಳ ಕಠಿಣ ಶಿಕ್ಷೆ ನೀಡಿದೆ. ಜತೆಗೆ 25 ಸಾವಿರ ರೂಪಾಯಿಗಳ ದಂಡ ವಿಧಿಸಿದೆ.

33 ವರ್ಷದ ಸಾಧಿಕ್​ 2019 ರ ಮೇ 19ರಂದು ಈ ಕೃತ್ಯ ಎಸಗಿದ್ದ. ಆಟವಾಡುತ್ತಿದ್ದ 8 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ.

ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸ್​ ಅಧಿಕಾರಿಗಳು ಸಾದಿಕ್​ ಈ ಕೃತ್ಯ ಎಸಗಿರುವುದನ್ನು ಪತ್ತೆ ಹಚ್ಚಿದ್ದರು. ಈತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲು ಮಾಡಲಾಗಿತ್ತು.

ಮಹಿಳಾ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ ಪ್ರಭಾವತಿ ಶೇತಾಸನದಿ ನೇತೃತ್ವದಲ್ಲಿ ಈ ಪ್ರಕರಣ ವಿಚಾರಣೆ ನಡೆದಿತ್ತು. ಈತನೇ ಅತ್ಯಾಚಾರ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಸೆಷನ್ಸ್​ ಕೋರ್ಟ್​ ನ್ಯಾಯಾಧೀಶೆ ಎಸ್. ನಾಗಶ್ರೀ ಅವರು 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net