More

    ನನ್ನ ಸಾವಿಗೆ ಬಿಜೆಪಿ ಮುಖಂಡ ಹಾಗೂ ಪಿಎಸ್​ಐ ಕಾರಣ ಎಂದು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

    ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಹಾಗೂ ಪೊಲೀಸರೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡೆತ್‌ನೋಟ್ ಬರೆದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಛೆಯ ನೆಹರು ನಗರದಲ್ಲಿ ನಡೆದಿದೆ.

    28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾಂಪ್ ಠಾಣೆಯ ಪಿಎಸ್ಐ ಹಾಗೂ ರಮೇಶ್​ ಜಾರಕಿಹೊಳಿ ಅವರ ಆಪ್ತ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ವಿರುದ್ಧ ಸಾವಿಯೋ ಕಿರುಕುಳದ ಆರೋಪ ಹೊರಿಸಿದ್ದಾರೆ. ಪೃಥ್ವಿ ಸಿಂಗ್​ ಅವರು ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

    ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗೂ ಕ್ಯಾಂಪ್ ಪಿಎಸ್‌ಐ ಸೇರಿ 1.50 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ಇನ್ನೂ ಹೆಚ್ಚಿನ ಹಣ ನೀಡುವಂತೆ ಕಿರುಕುಳ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಸಾವಿಯೋ ಬರೆದಿದ್ದಾರೆ.

    ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

    VIDEO: ಇದೇ ನನ್ನ ಅಂತಿಮ ಮಾತಾಗಿರ್ಬೋದು , ಯಾವುದೇ ಕ್ಷಣ ಕೊಲೆಯಾಗ್ಬೋದು… ವೈದ್ಯಕೀಯ ವಿದ್ಯಾರ್ಥಿನಿ ವಿಡಿಯೋ ವೈರಲ್​

    ದಾಂಪತ್ಯ ಜೀವನಕ್ಕೆ ಅಡಿ ಇಟ್ಟ ಖ್ಯಾತ ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್​ ಚಂದ್ರಶೇಖರನ್​

    VIDEO: ಸಿಎಂ ಮಮತಾ ಬಾಯಲ್ಲಿ ಆರ್​ಎಸ್​ಎಸ್​ನ ಶ್ಲಾಘನೆ- ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts