More

    ಕಳ್ಳಭಟ್ಟಿ ಸಾರಾಯಿ ಸೇವನೆ: ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ: ಜೀವ ಕಳೆದುಕೊಂಡರು 24 ಮಂದಿ

    ಪಟ್ನಾ: ಕಳ್ಳಭಟ್ಟಿ ಸಾರಾಯಿ ಸೇವಿಸಿ 24 ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲವಾರು ಮಂದಿ ಅಸ್ವಸ್ಥರಾಗಿದ್ದು, ಕೆಲವರು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

    ಕಳೆದ ಎರಡು ದಿನಗಳಿಂದ ಇಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಇದನ್ನೇ ಬಂಡವಾಳವಾಗಿಸಿಕೊಂಡ ಕೆಲವರು ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಇಳಿದಿದ್ದಾರೆ. ಸಮೀಪದ ಬೆಟ್ಟಿಯಾ ಬಳಿಯ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರವಷ್ಟೇ 8 ಮಂದಿ ಮೃತಪಟ್ಟಿದ್ದರು. ಇದೀಗ ಗೋಪಾಲ್‌ಗಂಜ್‌ನಲ್ಲಿ 16 ಮಂದಿ ಸತ್ತಿದ್ದಾರೆ.

    ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜನರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಂಡಗಳು ತನಿಖೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

    ಕಳ್ಳಭಟ್ಟಿ ಸೇವಿಸಿರುವುದು ಈ ದುರಂತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜನರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಂಡಗಳು ತನಿಖೆ ನಡೆಸುತ್ತಿವೆ ಎಂದು ಗೋಪಾಲ್‌ಗಂಜ್‌ ಹಿರಿಯ ಪೊಲೀಸ್‌ ಅಧಿಕಾರಿ ಆನಂದ್‌ ಕುಮಾರ್‌ ಹೇಳಿದ್ದಾರೆ.

    ಇನ್ನು ಘಟನಾ ಸ್ಥಳಕ್ಕೆ ಬಿಹಾರ ಸಚಿವ ಜಾನಕ್‌ ರಾಮ್‌ ಅವರು ಗೋಪಾಲ್‌ಗಂಜ್‌ಗೆ ಭೇಟಿ ನೀಡಿದ್ದಾರೆ. ಎನ್‌ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮಾಡಿರುವ ಪಿತೂರಿಯಾಗಿರಬಹುದು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

    ಕೆಎಸ್ಆರ್‌ಟಿಸಿ ಬಸ್‌- ಬೈಕ್ ನಡುವೆ ಶಿವಮೊಗ್ಗದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

    ‘13ನೇ ವಯಸ್ಸಿಗೆ ಸಿನಿಮಾ ಸಾಕು ಅನ್ನಿಸ್ತು… ಈಗೇನು 60-65 ವಯಸ್ಸಿಗೆ ಹೀರೋ ಆಗಲ್ಲಪ್ಪ… ತಂದೆ ಪಾರ್ಟ್‌ ಬೇಕಾದ್ರೆ ಮಾಡ್ಬೋದು…’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts