ಮದುವೆಗೆ ಹೋದವರು ಮಸಣ ಸೇರಿದರು! ಬಾವಿಗೆ ಬಿದ್ದು ಆರು ಮಂದಿಯ ಸಾವು

death
Published on

ಮಧ್ಯಪ್ರದೇಶ : ಕಾರೊಂದು ಆಯತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಬಾವಿಗೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರದ ಮಹಾರಾಜ್​ಪುರದಲ್ಲಿ ನಡೆದಿದೆ.

ಮದುವೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ಈ ಘಟನೆ ಸಂಭವಿಸಿದೆ. ಬಾವಿಗೆ ಚೌಕಟ್ಟು ಅಥವಾ ಇನ್ನಾವುದೇ ಸುರಕ್ಷತೆ ಅಳವಡಿಸದ ಹಿನ್ನೆಲೆಯಲ್ಲಿ ಕಾರು ಬಾವಿಯೊಳಕ್ಕೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.

ಇವರನ್ನು ಉತ್ತರ ಪ್ರದೇಶದ ಮಹೋಬಾದ ಸ್ವಾಸಾ ಗ್ರಾಮದವರು ಎಂದು ಗುರುತಿಸಲಾಗಿದೆ. 9 ಜನರಿದ್ದ ಕುಟುಂಬವು ನಿನ್ನೆ ರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್​ ಹೊರಡುವ ವೇಳೆ ಈ ಘಟನೆ ನಡೆದಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಸೇರಿ ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಿ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಅದರಲ್ಲಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net