More

    ಡಿಜೆಹಳ್ಳಿ ವಿವಾದ: ಕಂ‌ಪ್ಲೇಂಟ್‌ನಲ್ಲಿ ಯೂ ಟರ್ನ್-‌ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಪಾಷಾ ದೂರು!

    ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಎಂದು ನೆಪವೊಡ್ಡಿ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಕೊಳ್ಳಿ ಇಟ್ಟಿದ್ದ ಪ್ರಕರಣವೀಗ ಕ್ಷಣ ಕ್ಷಣಕ್ಕೂ ಕುತೂಹಲ ಪಡೆಯುತ್ತಿದೆ.

    ನವೀನನೇ ಈ ಎಲ್ಲಾ ಗಲಭೆಗೂ ಕಾರಣ ಎಂದು ದೂರು ನೀಡಿದ್ದವರಲ್ಲಿ ಒಬ್ಬರಾಗಿರುವ ಫಿರ್ದೋಸ್‌ ಪಾಷಾ ಇದೀಗ ಕಿಡಿಗೇಡಿಗಳ ವಿರುದ್ಧವೇ ತಿರುಗಿಬಿದ್ದಿದ್ದು, ಗಲಭೆಕೋರರ ವಿರುದ್ಧ ಕಂಪ್ಲೇಂಟ್‌ ಕೊಟ್ಟಿದ್ದಾರೆ.

    ಆಗ, ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದು ಸರಿಯಲ್ಲ ಎಂದು ನವೀನ್‌ ವಿರುದ್ಧ ದೂರು ದಾಖಲು ಮಾಡಿದ್ದು, ಇದೀಗ ತನ್ನ ಸ್ಕೂಟರ್‌ ಅನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಎಂದು ಡಿಜೆ ಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರಿಂದ ತಮಗೆ 75 ಸಾವಿರ ರೂ. ಮೌಲ್ಯ ನಷ್ಟವಾಗಿದೆ ಎಂದು ಫಿರ್ದೋಸ್‌ ಪಾಷಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಆಗಸ್ಟ್‌ 11 ರ ಸಂಜೆ 7:30ಕ್ಕೆ ನಾನು ನನ್ನ ಹೊಂಡಾ ಆಕ್ವೀವಾವನ್ನು ಡಿಜೆ ಹಳ್ಳಿ ಠಾಣೆಯಲ್ಲಿ ನಿಲ್ಲಿಸಿ ದೂರು ನೀಡಲು ಬಂದಿದ್ದೆ. ಈ ವೇಳೆ ಸುಮಾರು ಜನ ಠಾಣೆಯ ಒಳಗಡೆ ಬಂದು ಬಂದಿದ್ದಾರೆ. ಈ ಸಂದರ್ಭದಲ್ಲಿ ನನಗೆ ನನ್ನ ಸ್ಕೂಟರ್‌ ಅನ್ನು ತೆಗೆದುಕೊಂಡು ಹೋಗಲು ಸಾಧ್ಯವಾಗಲಿಲ್ಲ. ರಾತ್ರಿ 9 ಗಂಟೆಗೆ ಜಮಾಯಿಸಿದ ಜನ ನನ್ನ ಸ್ಕೂಟರ್‌ ಅನ್ನು ಸುಟ್ಟು ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಪಾಷಾ ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಅಡುಗೆ ಸಾಮಾನು ತರೋದಕ್ಕೆ ಹೋಗಿದ್ರಂತೆ ಡಿಜೆಹಳ್ಳಿ ಗಲಭೆ ಆರೋಪಿಗಳು!

    ಗಲಭೆಯಾದ ದಿನದಂದು 144 ಸೆಕ್ಷನ್‌ ಜಾರಿಯಾದ ಕಾರಣ ನನಗೆ ಆ ದಿನವೇ ದೂರು ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಈ ದಿನ ದೂರು ನೀಡುತ್ತಿದ್ದೇನೆ. ನನ್ನ ಸ್ಕೂಟರನ್ನು ಸುಟ್ಟು ಹಾಕಿ ನಾಶ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ಇದೀಗ ಯೂಟರ್ನ್‌ ಹೊಡೆದಿರುವುದು ಏತಕ್ಕೆ ಎಂಬ ಬಗ್ಗೆ ಪೊಲೀಸರಲ್ಲಿ ಹಲವಾರು ಸಂದೇಹಗಳು ಉಂಟು ಮಾಡಿದ್ದು, ಆ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

    ಸ್ವತ್ತಿನ ನಾಶ ಹಾಗೂ ನಷ್ಟ ಪ್ರತಿಬಂಧಕ ಅಧಿನಿಯಮ 1981 ಮತ್ತು ಐಪಿಸಿ ಸೆಕ್ಷನ್‌ 143, 145, 144, 147, 148, 149, 435 ಅಡಿ ಪ್ರಕರಣ ದಾಖಲಾಗಿದೆ.

    ಹಿಂದೂ ದೇವತೆಯನ್ನು ಕೀಳಾಗಿ ಸೃಷ್ಟಿಸಿ ಪೋಸ್ಟ್‌ ಹಾಕಿದ್ರು, ನಾನದಕ್ಕೆ ಕಮೆಂಟ್‌ ಹಾಕಿದ್ದಷ್ಟೇ…

    ಸೇತುವೆ ಸ್ಫೋಟಕ್ಕೆ ಉಗ್ರರ ಭಾರಿ ಸಂಚು: ಯೋಧರು ತಪ್ಪಿಸಿದ ಅನಾಹುತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts