ಡಿಕೆಶಿಗೆ ಡಬಲ್​ ಶಾಕ್​! ಆದಾಯ ಮೀರಿ ಆಸ್ತಿ ಗಳಿಕೆ ಆರೋಪ- ದಾಖಲಾಯ್ತು ಎಫ್​ಐಆರ್​

DKShi-FIR
Published on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆಯ ಮೇಲೆ ಇಂದು ನಸುಕಿನಲ್ಲಿಯೇ ರೇಡ್​ ಮಾಡಿ ಒಂದು ಶಾಕ್​ ಕೊಟ್ಟಿದ್ದ ಸಿಬಿಐ ಅಧಿಕಾರಿಗಳು, ಇದೀಗ ಅವರ ವಿರುದ್ಧ ಎಫ್​ಐಆರ್​ ದಾಖಲಿಸಿ ಇನ್ನೊಂದು ಶಾಕ್​ ನೀಡಿದ್ದಾರೆ.

ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.

ಇದಾಗಲೇ ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಸೇರಿ 14 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ಜತೆಗೆ ಇವರ ಸಹೋದರ ಡಿ.ಕೆ.ಸುರೇಶ್​ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ಹಣ ವರ್ಗಾವಣೆ ಆರೋಪದಲ್ಲಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಡಿಕೆಶಿ 2019ರ ಸೆಪ್ಟೆಂಬರ್ 3ರಂದು ವಿಚಾರಣೆ ಎದುರಿಸಿದ್ದರು. ಅಲ್ಲದೆ, ಬಂಧನಕ್ಕೆ ಒಳಗಾಗಿ ಜೈಲು ವಾಸವನ್ನು ಅನುಭವಿಸಿ, ಜಾಮೀನಿನ ಮೂಲಕ ಹೊರಬಂದಿದ್ದಾರೆ. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇದೇ ಇನ್ನೊಂದೆಡೆ, ಡಿಕೆಶಿ ಆಪ್ತ ಸಚಿನ್ ನಾರಾಯಣ್ ಮನೆ ಮೇಲೂ ಸಿಬಿಐ ಅಧಿಕಾರಿಗಳ ತಂಡ ರೇಡ್ ಮಾಡಿದೆ ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ ಅವರ ಹಾಸನದ ಮನೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net