More

    ಕರೊನಾ ಮಾರ್ಗಸೂಚಿ ಎರ್ರಾಬಿರ್ರಿ ಮಾಡಿದ್ರೆ ಹುಷಾರ್​, ಸರ್ಕಾರಕ್ಕೇ ಎಚ್ಚರಿಕೆ ನೀಡಿದ ಡಿಕೆಶಿ!

    ಬೆಂಗಳೂರು: ಕರೊನಾ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು. ಅದನ್ನು ಬಿಟ್ಟು ತಮಗೆ ಬೇಕಾದಾಗ ಮಾರ್ಗಸೂಚಿ ಬಿಡುಗಡೆ ಮಾಡಿ ಬೇಡವಾದಾಗ ಅದನ್ನು ಸಡಿಲ ಮಾಡಬಾರದು. ಆ ರೀತಿ ಮಾಡಿದರೆ ನಾವು ರಾಜಕೀಯ ಹೊರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಮಾರ್ಗಸೂಚಿ ಮಾಡಲಿ, ಅದು ಅವರಿಗೂ ಹಾಗೂ ಎಲ್ಲರಿಗೂ ಅನ್ವಯವಾಗುವಂತೆ ಮಾಡಲಿ. ಅವರಿಗೆ ಬೇಕಾದವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಮಾಡುವುದು ಬೇಡ. ಇದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ. ಜನರ ಸುರಕ್ಷತೆ ಹಾಗೂ ಒಳ್ಳೆಯದಕ್ಕಾಗಿ ಕಾನೂನು ಮಾಡಲಿ, ನಾವು ಬೇಡ ಎನ್ನುವುದಿಲ್ಲ ಎಂದರು.

    ಆ ಕಾನೂನನ್ನು ಎಲ್ಲರೂ ಪಾಲಿಸಬೇಕು. ಅವರಿಗೆ ಬೇಕಾದಾಗ ಕಾನೂನು ಸಡಿಲ ಮಾಡುವುದು ಬೇಕಾದಾಗ ಕಠಿಣ ಮಾಡುವುದು ಸರಿಯಲ್ಲ. ಆ ರೀತಿ ಮಾರ್ಗಸೂಚಿ ಮಾಡಿದರೆ ನಾವು ನಮ್ಮದೇ ಆದ ರಾಜಕೀಯ ಹೋರಾಟ ಮಾಡುತ್ತೇವೆ ಎಂದರು.

    ಮಗು ಗರ್ಭದಲ್ಲಿದ್ದಾಗಲೇ ಮತ್ತೊಮ್ಮೆ ಗರ್ಭ ಧರಿಸಿದ ಮಹಿಳೆ- ನಂಬಲು ಆಗ್ತಿಲ್ವಾ? ಈ ಘಟನೆ ಓದಿ..

    ಹೋಳಿ ಹಬ್ಬಕ್ಕೆ ಫುಲ್​ ಟೈಟ್​: ವಾಟರ್​ಟ್ಯಾಂಕ್​ ಸರಸರ ಏರಿ ಡಾನ್ಸ್​ ಮಾಡಿದ ಭೂಪ!

    ನಾನು ಕೂಲಿಯವ, ನನ್ನಲ್ಲಿ ಆಸ್ತಿ ಇಲ್ಲ: ಹೆಂಡ್ತಿಗೆ ಡಿವೋರ್ಸ್​ ಕೊಟ್ರೆ ಹಿರಿಯರ ಆಸ್ತಿಯಲ್ಲಿ ಪಾಲು ಕೊಡಬೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts