More

    ರಾಜ್ಯದಲ್ಲಿಯೂ ಡಿಆರ್‌ಡಿಒ ಕೋವಿಡ್‌ ಚಿಕಿತ್ಸಾ ಕೇಂದ್ರ ಆರಂಭಿಸಿ: ರಕ್ಷಣಾ ಸಚಿವರಿಗೆ ಡಿಸಿಎಂ ಪತ್ರ

    ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿ.ಆರ್.ಡಿ.ಒ. ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕೇಂದ್ರದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ದೆಹಲಿ, ವಾರಾಣಸಿ, ಅಹಮದಾಬಾದ್, ಮತ್ತು ಲಖನೌ ಗಳಲ್ಲಿ ಡಿ.ಆರ್.ಡಿ. ಒ. ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರದ ರಕ್ಷಣಾ ಸಚಿವರನ್ನು ಸವದಿಯವರು ಅಭಿನಂದಿಸಿದ್ದಾರೆ.

    ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರುಗಳ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ.

    ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳೂ ಈಗ ಲಭ್ಯವಿದೆ. ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಸವದಿಯವರು ರಕ್ಷಣಾ ಸಚಿವರಲ್ಲಿ ಕೋರಿಕೊಂಡಿದ್ದಾರೆ.

    ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ರದ್ದು ಎಂದು ಹರಿದಾಡ್ತಿರೋ ಸುದ್ದಿ ನಿಜನಾ? ಸಚಿವರು ಏನು ಹೇಳಿದ್ದಾರೆ ನೋಡಿ..

    ‘ಲವ್‌ ಯು ಜಿಂದಗಿ’ ಎಂದು ಹೇಳುತ್ತಲೇ ಜೀವ ತೊರೆದ ಯುವತಿ: ಬದುಕು ಕಸಿದ ಕರೊನಾ

    ಸೋಂಕಿತ ಬಾಲಕನಿಗೆ ಮರವೇ ಐಸೋಲೇಷನ್‌ ಸೆಂಟರ್‌! ಮನೆಯಲ್ಲಿಲ್ಲ ಜಾಗ, 11 ದಿನಗಳಿಂದ ಇಲ್ಲಿಯೇ ವಾಸ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts