More

    ಕರೊನಾದಿಂದ ಸೋನಿಯಾ ಗೈರು, ವಿದೇಶಕ್ಕೆ ಹೋದ ರಾಹುಲ್​ ‘ನಾಪತ್ತೆ’? ಮತ್ತೊಮ್ಮೆ ಇಡಿ ಸಮನ್ಸ್​!

    ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡು ಸಂಸದ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಇದೇ 1ರಂದು ನೋಟಿಸ್​ ಜಾರಿಗೊಳಿಸಿತ್ತು. ಜೂನ್​ 2ರಂದು ವಿಚಾರಣೆಗೆ ಹಾಜರಾಗುವಂತೆ ಅದರಲ್ಲಿ ಉಲ್ಲೇಖಿಸಲಾಗಿತ್ತು.

    ಇದರ ಬೆನ್ನಲ್ಲೇ ಇಂದು ಸೋನಿಯಾ ಗಾಂಧಿ ಅವರಿಗೆ ಜೂನ್​ 2ರಂದೇ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ ಎಂದು ಕಾಂಗ್ರೆಸ್​ ಪಕ್ಷದ ಮುಖ್ಯ ವಕ್ತಾರ ರಣದೀಪ್​ ಸುರ್ಜೇವಾಲ ತಿಳಿಸಿದ್ದರು. ಅವರು ಕ್ವಾರಂಟೈನ್​ನಲ್ಲಿ ಇರಬೇಕಿರುವ ಕಾರಣ, ಇ.ಡಿ ಮುಂದೆ ಹಾಜರಾಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಪ್ರಿಯಾಂಕಾಗಾಂಧಿಯವರಿಗೂ ಕರೊನಾ ಪಾಟಿಸಿವ್​ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.

    ಇ.ಡಿ ನೀಡಿರುವ ಸಮನ್ಸ್​ಗೆ ಕರೊನಾದ ಕಾರಣದಿಂದ ಸೋನಿಯಾ ಗೈರಾಗಿದ್ದರೆ, ರಾಹುಲ್​ ಗಾಂಧಿ ಹಾಜರು ಆಗಬೇಕಿತ್ತು. ಆದರೆ ಸದ್ಯ ರಾಹುಲ್​ ಗಾಂಧಿಯವರು ವಿದೇಶಕ್ಕೆ ಹೋದವರು, ಅವಧಿ ಮುಗಿದರೂ ಮರಳಲಿಲ್ಲ ಎನ್ನಲಾಗಿದೆ.

    ರಾಹುಲ್ ಗಾಂಧಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಹುಲ್ ಇಡಿ ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ್ದಾರೆ. ಕಾಂಗ್ರೆಸ್​​ ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಕಳೆದ ಮೇ 19ರಂದು ಲಂಡನ್​ಗೆ ಪ್ರವಾಸ ಮಾಡಿದ್ದಾರೆ. ಮೇ 20 ರಿಂದ ಮೇ 23ರವರೆಗೆ ಲಂಡನ್‌ನಲ್ಲಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ವಾಪಸಾಗಬೇಕಿತ್ತು. ಆದರೆ ಇದುವರೆಗೂ ಅವರು ವಾಪಸಾಗಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇ.ಡಿ. ನೀಡಿರುವ ಸಮನ್ಸ್​ ಅವರು ಪಡೆದಿಲ್ಲ. ಇದೇ ಕಾರಣಕ್ಕೆ ಇದೀಗ ಮತ್ತೊಮ್ಮೆ ಸಮನ್ಸ್​ ಜಾರಿಗೊಳಿಸಲಾಗಿದೆ. ಜೂನ್​ 5ರಂದು ಅವರು ಇ.ಡಿ. ಮುಂದೆ ಹಾಜರು ಆಗಬೇಕಿದೆ.

    ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?
    ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.

    2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

    ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿದೆ. ಇದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಕರೊನಾ ಕಾಣಿಸಿಕೊಂಡಿದೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ದಿನಾಂಕ ಕೋರಿರುವ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ.

    ರಾಹುಲ್ ಗಾಂಧಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಹುಲ್ ಇಡಿ ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ್ದರು. ಕಾಂಗ್ರೆಸ್​​ ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಮೇ 20 ರಿಂದ ಮೇ 23ರವರೆಗೆ ಲಂಡನ್‌ನಲ್ಲಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 19ರಂದು ಭಾರತದಿಂದ ಹೋಗಿದ್ದಾರೆ. ಅಂದು ಹೋದವರು ಇನ್ನೂ ಸ್ವದೇಶಕ್ಕೆ ಹಿಂತಿರುಗಿಲ್ಲ. ಜೂನ್‌ 5ರಂದು ರಾಹುಲ್‌ ದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ.
    ಏನಿದು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ?: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಪಕ್ಷದ ಪ್ರಚಾರಕ್ಕಾಗಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇತ್ತೀಚೆಗೆ ಪ್ರಕರಣ ದಾಖಲಿಸಲಾಗಿದೆ. ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.

    ಬೆಚ್ಚಿಬೀಳಿಸಿದ್ದ ರೇಪ್​ ಕೇಸ್​: ಕಬ್ಬಿಣದ ರಾಡ್​ ತೂರಿಸಿ ಕೊಲೆ ಮಾಡಿದ್ದ ಪಾತಕಿಗೆ ಗಲ್ಲು ಶಿಕ್ಷೆ

    ಸ್ನೇಹಿತೆಯರು ಇಲ್ಲದಾಗ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ: ಕಾರಣ ನಿಗೂಢ!

    ಜೈಲಿಗೆ ಕರೆದೊಯ್ಯುವಾಗ ಕಳ್ಳ-ಪೊಲೀಸ್​ ಫ್ರೆಂಡ್​ಷಿಪ್​! ಜೆಸ್ಕಾಂ ಅಧಿಕಾರಿಯ ಭೀಕರ ಕೊಲೆ ಕೇಸ್​ ಬೆಳಕಿಗೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts