ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್​ಗೆ ಬಿಗ್​ ಶಾಕ್​! ಅಧ್ಯಕ್ಷ ಸೇರಿದಂತೆ ಎಂಟು ಮಂದಿ ಶಾಸಕರು ಬಿಜೆಪಿಗೆ ಸೇರ್ಪಡೆ

ಮಣಿಪುರ: ಮಣಿಪುರದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಸೇರಿದಂತೆ ಎಂಟು ಮಂದಿ ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದು, ಈ ಬೆಳವಣಿಗೆಯಿಂದಾಗಿ ಕಾಂಗ್ರೆಸ್​ಗೆ ಭಾರಿ ಆಘಾತ ಎದುರಾಗಿದೆ. ಕೊಂತೌಜಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದರ ಬೆನ್ನಲ್ಲೇ ಎಂಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಎಲ್ಲರೂ ಇಂದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. 2022 ರಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ರಾಜಕೀಯ ಅಂಗಳದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಈ ರೀತಿ … Continue reading ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್​ಗೆ ಬಿಗ್​ ಶಾಕ್​! ಅಧ್ಯಕ್ಷ ಸೇರಿದಂತೆ ಎಂಟು ಮಂದಿ ಶಾಸಕರು ಬಿಜೆಪಿಗೆ ಸೇರ್ಪಡೆ