More

    ಚುನಾವಣೆ ನಡುವೆಯೇ ಮಳೆಯ ಅಬ್ಬರ, ಭೂಕುಸಿತ- ಅಪಾರ ಸಾವು-ನೋವು

    ವಾಷಿಂಗ್ಟನ್‌: ಅಮೆರಿಕದಲ್ಲೀಗ ಚುನಾವಣೆಯ ಕಾವು. ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುತೂಹಲ ಒಂದೆಡೆ ಇದ್ದರೆ, ಅದೇ ಇನ್ನೊಂದೆಡೆ ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಸಂಭವಿಸಿದೆ.

    ಈ ಭೂಕುಸಿತದಲ್ಲಿ 50ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹಲವರು ಕಾಣೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಮಧ್ಯ ಅಮೆರಿಕದಲ್ಲಿ ಮಳೆಯಿಂದಾಗಿ 23 ಮಂದಿ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಕಸ ಎಸೆಯುವ ಮುನ್ನ ಎಚ್ಚರ! ನಿಮ್ಮ ಕಸ ನಿಮಗೇ ರಿಟರ್ನ್​ ಗಿಫ್ಟ್​ ಆಗಿ ಬರುತ್ತೆ ಹುಷಾರ್​

    ಎಟಾ ಚಂಡಮಾರುತದ ಪರಿಣಾಮ ಮಧ್ಯ ಅಮೆರಿಕದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭಾರಿ ಅವಾಂತರ ಸೃಷ್ಟಿಯಾಗಿದ್ದು, ನೀರಿನ ಪ್ರವಾಹ ಮತ್ತು ಭೂಕುಸಿತದಿಂದಾಗಿ ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ.

    ಮಧ್ಯ ಗ್ವಾಟೆಮಾಲಾದಲ್ಲಿ ಗುಡ್ಡ ಕುಸಿತದಿಂದ 25 ಮನೆಗಳು ನೆಲಸಮವಾಗಿದ್ದು, ಹಲವಾರು ಮಂದಿ ಅವಶೇಷದಡಿ ಸಿಲುಕಿದ್ದಾರೆ. ವಿವಿಧೆಡೆ ಗುಡ್ಡ ಕುಸಿತಗಳು ಸಂಭವಿಸಿದ್ದು, ಇಲ್ಲಿನ ಸ್ಯಾನ್‌ ಕ್ರಿಸ್ಟೊಬಾಲ್‌ ವೆರಪಾಜ್‌ ನಗರದಲ್ಲೂ ಭಾರಿ ಭೂಕುಸಿತವಾಗಿದೆ.

    ಮಧ್ಯ ಅಮೆರಿಕದಲ್ಲಿ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಗ್ವಾಟೆಮಾಲದಿಂದ ಪನಾಮಾವರೆಗೂ ಅನೇಕ ಭೂಕುಸಿತಗಳು ಸಂಭವಿಸಿವೆ ಎಂದು ಎಂದು ಅಧ್ಯಕ್ಷ ಅಲ್‌ಜಂಡ್ರೊ ಗಿಯಾಮಟೈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

    ಅಮೆರಿಕ ಚುನಾವಣೆ- ಜಾರ್ಜಿಯಾದಲ್ಲಿ ಕೊನೆ ಕ್ಷಣದಲ್ಲಿ ರೋಚಕ ತಿರುವು

    ಅಮೆರಿಕ ಅಧ್ಯಕ್ಷ ಚುನಾವಣೆ ಗಲಾಟೆ ನಡುವೆಯೇ ನಾಯಿಗೆ ದಕ್ಕಿತು ಮೇಯರ್‌ ಪಟ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts