More

    ಇಂಜಿನಿಯರಿಂಗ್ ಪದವೀಧರರಿಗೆ ಗುಡ್​ನ್ಯೂಸ್: ಬಿಇಎಲ್​ನಲ್ಲಿ 511 ಹುದ್ದೆಗಳಿಗೆ ಆಹ್ವಾನ

    ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ. ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಈ ಸಂಸ್ಥೆಯಲ್ಲಿ ಪ್ರಸ್ತುತ ಆರಂಭಿಸಲಾಗುತ್ತಿರುವ Export Manufacturing, SC & US, Military Radars and Military Communication ಯೋಜನೆಯಡಿ ಎಸ್​ಬಿಯು ಕಾಂಪ್ಲೆಕ್ಸ್​ನಲ್ಲಿ ಕಾರ್ಯನಿರ್ವಹಿಸಲು ಇಂಜಿನಿಯರ್​ಗಳಿಗೆ ಅವಕಾಶ ಇದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಒಟ್ಟು ಹುದ್ದೆಗಳು: 511

    ಬೆಂಗಳೂರಿನ ಬಿಇಎಲ್ ಎಸ್​ಬಿಯು ಘಟಕದಲ್ಲಿ ಟ್ರೇನಿ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿದ್ದು, ಈ ಹುದ್ದೆಗಳು ಆರಂಭದಲ್ಲಿ 2 ವರ್ಷದ ಅವಧಿಗೆ ಒಳಪಟ್ಟಿದ್ದು, ಕಾರ್ಯಾವಧಿಯನ್ನು ಮತ್ತೆ 2 ವರ್ಷ ವಿಸ್ತರಿಸಬಹುದು. ಆರಂಭದಲ್ಲಿ ಅಭ್ಯರ್ಥಿಗಳನ್ನು ಬೆಂಗಳೂರಿನ ಘಟಕದಲ್ಲೇ ನೇಮಕ ಮಾಡಲಾಗುವುದು ನಂತರ ದೇಶದ ಯಾವುದೇ ಭಾಗಕ್ಕಾದರೂ ವರ್ಗ ಮಾಡಬಹುದಾಗಿದ್ದು, ಇದಕ್ಕೆ ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಹುದ್ದೆ ವಿವರ

    * ಟ್ರೇನಿ ಇಂಜಿನಿಯರ್ ಐ – 308

    * ಪ್ರಾಜೆಕ್ಟ್ ಇಂಜಿನಿಯರ್ ಐ – 203

    ಶೈಕ್ಷಣಿಕ ಅರ್ಹತೆ:

    ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಷನ್/ ಮೆಕಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್​ನಲ್ಲಿ ಬಿಇ, ಬಿ.ಟೆಕ್ ಪದವಿ ಪಡೆದಿದ್ದು, ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು, ಉಳಿದ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ವೃತ್ತಿ ಅನುಭವ ಕೇಳಲಾಗಿದೆ. ಬೋಧನೆ ಹಾಗೂ ಸಂಶೋಧನಾ ವೃತ್ತಿ ಅನುಭವವನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.

    ವಯೋಮಿತಿ: 1.8.2021ಕ್ಕೆ ಅನ್ವಯವಾಗುವಂತೆ ಟ್ರೇನಿ ಇಂಜಿನಿಯರ್​ಗೆ ಗರಿಷ್ಠ 25 ವರ್ಷ, ಪ್ರಾಜೆಕ್ಟ್ ಇಂಜಿನಿಯರ್​ಗೆ ಗರಿಷ್ಠ 28 ವರ್ಷ. ಸರ್ಕಾರದ ನಿಯಮದನ್ವಯ ಮೀಸಲಾತಿ ಅಭ್ಯರ್ಥಿಗಳಿಗೆ 3 ರಿಂದ 10 ವರ್ಷ ವಯೋ ಸಡಿಲಿಕೆ ಇದೆ.

    ವೇತನ: ಟ್ರೇನಿ ಇಂಜಿನಿಯರ್​ಗೆ ಮೊದಲ ವರ್ಷ ಮಾಸಿಕ 25,000 ರೂ. 2ನೇ ವರ್ಷ ಮಾಸಿಕ 28,000, 3ನೇ ವರ್ಷ 31,000 ರೂ. ವೇತನ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್ ಇಂಜಿನಿಯರ್​ಗೆ ಮೊದಲ ವರ್ಷ ಮಾಸಿಕ 35,000 ರೂ., 2ನೇ ವರ್ಷ 40,000 ರೂ., 3ನೇ ವರ್ಷ 45,000 ರೂ., 4ನೇ ವರ್ಷಕ್ಕೆ ಮಾಸಿಕ 50,000 ರೂ. ವೇತನ ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ವೃತ್ತಿ ಅನುಭವ ಆಧರಿಸಿ ಸಿದ್ಧಪಡಿಸಲಾದ ಆಯ್ದಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ವೀಡಿಯೋ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಶಾರ್ಟ್​ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ಪಟ್ಟಿಯನ್ನು ಬಿಇಎಲ್ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು.

    ಅರ್ಜಿ ಶುಲ್ಕ: ಎಸ್​ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಟ್ರೇನಿ ಹುದ್ದೆಗೆ 200 ರೂ., ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.

    ಮೀಸಲಾತಿ: ಸಾಮಾನ್ಯವರ್ಗದ ಅಭ್ಯರ್ಥಿಗೆ 208 ಸ್ಥಾನ, ಆರ್ಥಿಕವಾಗಿ ದುರ್ಬಲವಾಗಿರುವವರಿಗೆ 52, ಇತರ ಹಿಂದುಳಿದ ವರ್ಗಕ್ಕೆ 137, ಎಸ್ಸಿಗೆ 77, ಎಸ್ಟಿಗೆ 37 ಸ್ಥಾನ ಮೀಸಲಿರಿಸಿದ್ದು, ಇದರಲ್ಲಿ ಶೇ.4 ಸ್ಥಾನಗಳನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೇ ದಿನ: 15.8.2021

    ಅಧಿಸೂಚನೆಗೆ: https://bit.ly/3Act7FY

    ಮಾಹಿತಿಗೆ:http://www.bel-india.in

    ವಿಜ್ಞಾನ ವಿಷಯದಲ್ಲಿ ಪಿಯುಸಿಯಾದವರಿಗೆ ಸೈನಿಕ ಶಾಲೆಯಲ್ಲಿ ಹುದ್ದೆ: 81 ಸಾವಿರ ರೂ.ವರೆಗೆ ಸಂಬಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts