More

    ಬಾಲಕಿ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲು- ಸಹಕರಿಸಿದವರಿಗೆ ಜೀವಾವಧಿ ಶಿಕ್ಷೆ

    ಗುವಾಹಟಿ: ಸುಮಾರು 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್‌ಗೆ ಇಲ್ಲಿಯ ಕೋರ್ಟ್‌ 25 ವರ್ಷಗಳ ಜೈಲು ಶಿಕ್ಷೆ ಹಾಗೂ ಐದು ಲಕ್ಷ ರೂಪಾಯಿ ದಂಡ ವಿಧಿಸಿದೆ.

    ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್‌ಗೆ ಸ್ಥಳೀಯ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪ ನೀಡಿದೆ. ಶಾಸಕರಿಗೆ ಸಹಾಯ ಮಾಡಿದ್ದ ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇವರಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

    2017 ರಲ್ಲಿ ಜೂಲಿಯಸ್ ಅವರು ಶಾಸಕರಾಗಿದ್ದ ವೇಳೆ 14 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿತ್ತು. ಬಳಿಕ ಅವರು ನಾಪತ್ತೆಯಾಗಿದ್ದರು. ನಂತರ ಅವರನ್ನ ಗುವಾಹಟಿಯಲ್ಲಿ ಪತ್ತೆ ಮಾಡಿ ಬಂಧಿಸಲಾಗಿತ್ತು. ನಾಲ್ಕು ವರ್ಷಗಳವರೆಗೆ ಅವರ ವಿರುದ್ಧ ಕೇಸಿನ ವಿಚಾರಣೆ ನಡೆಯುತ್ತಿತ್ತು.

    ಇದೇ 13ರಂದು ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ, ಈಗ ಶಿಕ್ಷೆಯ ಪ್ರಮಾಣವನ್ನು ನಿಗದಿ ಮಾಡಿದೆ. ವಿಶೇಷ ನ್ಯಾಯಾಲಯದ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಥವಾ ಪೋಕ್ಸೊ) ನ್ಯಾಯಾಧೀಶರು ಈ ತೀರ್ಪು ಹೊರಡಿಸಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ.

    ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮುಂದಿನ ವಾರ ಮೇಘಾಲಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅವರ ವಕೀಲ ಹೇಳಿದ್ದಾರೆ.

    ‘ಪ್ರತಿ ಮನೆಯಿಂದಲೂ ಹುಡುಗಿಯರನ್ನು ಎತ್ತಿಕೊಂಡು ಹೋದರು- ಗುಂಡಿಕ್ಕಿ ಸಾಯಿಸಿ ಲೈಂಗಿಕ ಕ್ರಿಯೆ ನಡೆಸ್ತಾರೆ!

    ‘ಹುಲಿ ಎರಡು ಹೆಜ್ಜೆ ಹಿಂದೆ ಹೋದರೆ ಅದು ಬೇಟೆಗಾಗಿ… ತಾಲಿಬಾನಿಗಳ ಜತೆ ಪಾಕಿಗಳಿಗೂ ಬುದ್ಧಿಕಲಿಸುವೆ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts