VIDEO: ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್‌ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು. ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್​ ಅವರ ಚಿತ್ರವಿರುವ ಬ್ಯಾನರ್‌ ಮುಂದೆ ಕೈಮುಗಿದು ಕುಳಿತುಕೊಂಡಿರುವ … Continue reading VIDEO: ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌