ಕಮಲಾ ನೆಹರೂ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ಕು ನವಜಾತ ಶಿಶುಗಳು ಸಜೀವ ದಹನ!

fire
Published on

ಭೋಪಾಲ್: ಆಸ್ಪತ್ರೆಯ ನವಜಾತ ಶಿಶು ನಿಗಾ ಘಟಕದಲ್ಲಿ (ಎಸ್​ಎನ್​ಸಿಯು) ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಭೋಪಾಲ್​ನ ಕಮಲಾ ನೆಹರೂ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

ಐಸಿಯುನ ಮೂರನೆಯ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ದುರಂತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಈ ವಾರ್ಡ್‌ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ಕಾರ್ಯ ತ್ವರಿತವಾದ ಹಿನ್ನೆಲೆಯಲ್ಲಿ ಉಳಿದ ಮಕ್ಕಳನ್ನು ಬಚಾವ್‌ ಮಾಡಲಾಗಿದೆ.

ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶಿಸಿದೆ. ಈ ದುರಂತದಲ್ಲಿ ಮೃತಪಟ್ಟಿರುವ ನಾಲ್ಕು ಮಕ್ಕಳ ಪೋಷಕರಿಗೆ 4 ಲಕ್ಷ ರೂ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​ ಘೋಷಿಸಿದ್ದಾರೆ.

ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 10 ವಾಹನಗಳೊಂದಿಗೆ ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದೆವು ಎಂದು ಫತೇಘರ್​ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬೇರ್ ಖಾನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net