VIDEO: 22 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಬಸ್‌ಗೆ ಬೆಂಕಿ: ಬೆಳಗ್ಗೆ ಕಾರವಾರದಲ್ಲಿ ಭಾರಿ ಅವಘಡ- ಸುಟ್ಟ ಭಸ್ಮವಾದ ವಾಹನ

bus1
Published on

ಕಾರವಾರ: ಮುಂಬೈನಿಂದ ಮಂಗಳೂರು ಕಡೆ ಹೊರಟಿದ್ದ ಖಾಸಗಿ ಬಸ್‌ವೊಂದು ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಘಟನೆ ಇಂದು ನಸುಕಿನಲ್ಲಿ ನಡೆದಿದೆ.

22 ಪ್ರಯಾಣಿಕರು ಇದ್ದ ಈ ಬಸ್‌ ಚಲಿಸುತ್ತಿರುವಾಗಲೇ ಬೆಂಕಿ ಹೊತ್ತಿಕೊಂಡಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಪ್ರಾಣಕ್ಕೆ ಹಾನಿಯಾಗಿಲ್ಲ. ಬೆಂಕಿ ಹೊತ್ತಿದ್ದು ತಿಳಿಯುತ್ತಲೇ ಚಾಲಕ ಸಮಯಪ್ರಜ್ಞೆ ಮೆರೆದಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ.

ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. (ದಿಗ್ವಿಜಯ ನ್ಯೂಸ್‌)

ಬಸ್‌ ಸುಟ್ಟುಹೋದ ವಿಡಿಯೋ ಇಲ್ಲಿದೆ ನೋಡಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net