ಬೆಂಗಳೂರಿನಲ್ಲಿ ಬೈಕ್‌ ಸವಾರರ ಜಾಲಿರೈಡ್‌ಗೆ ಐದು ಕಾರುಗಳು ‘ಬಲಿ’! ಸರಣಿ ಅಪಘಾತದಿಂದ ಆತಂಕ

ಬೆಂಗಳೂರು: ಇಂದು ಬೆಳಗ್ಗೆ ಐದು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಏರ್‌ಪೋರ್ಟ್ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ಐದು ಕಾರುಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಆರಂಭದಲ್ಲಿ ನಿಸಾನ್‌ ಕಂಪೆನಿಯ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅತ್ತ ಹಾರಿ ಹೋದದ್ದೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣ, ಈ ಕಾರು ನಿಯಂತ್ರಣ ತಪ್ಪಲು ಬೈಕ್​ ಸವಾರರ ಜಾಲಿ ರೈಡ್​ ಕಾರಣವಾಗಿರಬಹುದು ಎಂಬ ಸಂದೇಹವಿದೆ.

ಇಂದು ಭಾನುವಾರವಾದ್ದರಿಂದ ಬೈಕ್ ಸವಾರರು ವಿಮಾನ ನಿಲ್ದಾಣದ ರಸ್ತೆಯಲ್ಲಿ ನಂದಿಬೆಟ್ಟದ ಕಡೆಗೆ ಜಾಲಿ ರೈಡ್ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಕಾರನ್ನು ಓವರ್‌ ಟೇಕ್‌ ಮಾಡಲು ಹೋಗಿ ಎರ್ರಾಬಿರ್ರಿ ಚಲಾಯಿಸಿದ್ದರಿಂದ ಕಾರಿನ ಚಾಲಕ ನಿಯಂತ್ರಣ ತಪ್ಪಿರಬಹುದು ಎನ್ನಲಾಗಿದೆ.

ಈ ಕಾರು ವಿಮಾನ ನಿಲ್ದಾಣದ ಕಡೆ ಹೊರಟಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆಯಿತು. ಚಾಲಕ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದರಿಂದ ಆ ಕಾರು ಇಂಡಿಕಾ ಕಾರಿಗೆ ನಂತರ ಆ ಕಾರು ಆಲ್ಟೋ ಸೇರಿದಂತೆ ಇತರೆ ಮೂರು ಕಾರುಗಳಿಗೆ ಡಿಕ್ಕಿಹೊಡೆದಿದೆ.

ಅರೆ ಕ್ಷಣದಲ್ಲಿ ಇಷ್ಟೆಲ್ಲಾ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಅನಾಹುತದಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಟ್ರಾಫಿಕ್​ ಪೊಲೀಸರು ಬಂದು, ಜಖಂಗೊಂಡ ಕಾರುಗಳನ್ನು ತೆರವು ಮಾಡಿದ್ದಾರೆ.

ನಿರುದ್ಯೋಗಿಗಳಿಗೆ ಬಂಪರ್‌ ಅವಕಾಶ: ಅಂಚೆ ಇಲಾಖೆಯಲ್ಲಿದೆ 2443 ಹುದ್ದೆ- ಕರ್ನಾಟಕದಲ್ಲಿ ಕೆಲಸ

ಕಣ್ಣೆದುರೇ ಕುಟುಂಬಸ್ಥರ ಮೇಲೆ ಥರ್ಡ್‌ ಡಿಗ್ರಿ ಪ್ರಯೋಗಿಸಿದ ಪೊಲೀಸರು: ಬೆದರಿ ಯುವತಿಯ ಆತ್ಮಹತ್ಯೆ

ಪ್ರತಿಭಟನೆಯಲ್ಲಿಯೇ ಪಂಬಾಬ್‌ನ ‘ರೈತ’ ಮೃತಪಟ್ಟದ್ದು ನಿಜನಾ? ವೈರಲ್‌ ಫೋಟೋದ ಹಿಂದಿನ ಅಸಲಿಯತ್ತೇನು?

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…