ಬೆಳ್ಳಂಬೆಳಗ್ಗೆ ಫ್ಲೈ ಓವರ್‌ ಕುಸಿತ: 14 ಮಂದಿ ಗಂಭೀರ ಗಾಯ- ಮುಂಬೈನಲ್ಲಿ ಮಹಾ ದುರಂತ

flyover
Published on

ಮುಂಬೈ : ಮುಂಬೈನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ನಡೆದಿದ್ದು, 14 ಕಾರ್ಮಿಕರು ಗಾಯಗೊಂಡಿದ್ದಾರೆ.

ಇಂದು ಮುಂಜಾನೆ 4.40ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು.

ಫ್ಲೈ ಓವರ್ ಕುಸಿದ ಪರಿಣಾಮ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net