More

    ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್​- ನಿರ್ಮಲಾ ಸೀತಾರಾಮನ್​ ಘೋಷಣೆ

    ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಯೋಜನೆಯನ್ನು ಕೇಂದ್ರ ಸರ್ಕಾರ ಇಂದು ಘೋಷಣೆ ಮಾಡಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಾಹಿತಿ ನೀಡಿದರು.

    ಈ ರೀತಿ ಹಬ್ಬದ ಮುಂಗಡ ಯೋಜನೆಗೆ 7ನೇ ವೇತನ ಆಯೋಗ ಜಾರಿಯಾದ ನಂತರ ನಿಲ್ಲಿಸಲಾಗಿದೆ. ಆದರೆ ಈ ಬಾರಿ ಕರೊನಾ ಹಿನ್ನೆಲೆಯಲ್ಲಿ, ವಿಶೇಷವಾಗಿ ಕೇಂದ್ರ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಬಡ್ಡಿ ರಹಿತ ಮುಂಗಡವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಹಬ್ಬದ ಮುಂಗಡ ಹಣದ ರೂಪದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಹತ್ತು ಸಾವಿರ ರೂಪಾಯಿ ಬಡ್ಡಿ ರಹಿತವಾಗಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂಪಾಯಿ ಮುಂಗಡ ದೊರೆಯಲಿದ್ದು, ಮುಂದಿನ ವರ್ಷದ ಮಾರ್ಚ್​ 31ರವರೆಗೂ ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದ್ದು, ಕೇಂದ್ರ ಸರ್ಕಾರ ಇದಕ್ಕಾಗಿ 4 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ.

    ಇದನ್ನೂ ಓದಿ: ಪಕ್ಷೇತರರನ್ನು ಸೆಳೆಯಲು ಕಸರತ್ತು ; ಕೋಲಾರ ನಗರವನ್ನಾಳಲು ನಾರಿಯರ ಪೈಪೋಟಿ

    ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ಇಲ್ಲಿಯವರೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಎಲ್​ಟಿಸಿ (ಪ್ರಯಾಣ ಕೈಗೊಂಡರೆ ಅದರಲ್ಲಿ ಶ್ರೇಣಿಗೆ ಅನುಗುಣವಾಗಿ ಭತ್ಯೆ ನೀಡುವುದು) ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗಿಗಳು ತಾವು ಬಯಸುವ ಪ್ರದೇಶಗಳಿಗೆ ಭೇಟಿ ನೀಡಲು ಹಾಗೂ ಒಮ್ಮೆ ತಮ್ಮ ಊರಿಗೆ ತೆರಳುವ ವೆಚ್ಚವನ್ನು ಎಲ್​ಟಿಸಿ ರೂಪದಲ್ಲಿ ಪಡೆಯುತ್ತಿದ್ದರು. ಆದರೆ ಈ ಬಾರಿ ನಗದು ವೋಚರ್​ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.

    ನಗದು ವೋಚರ್​ಗಳನ್ನು ಆಹಾರೇತರ, ಶೇ.12 ಹಾಗೂ ಹೆಚ್ಚಿನ ಜಿಎಸ್​ಟಿ ರೇಟೆಡ್ ಉತ್ಪನ್ನಗಳನ್ನು ಖರೀದಿಸಲು ಮಾತ್ರ ಬಳಕೆ ಮಾಡಬಹುದಾಗಿದ್ದು, ಜಿಎಸ್​ಟಿ ನೋಂದಾಯಿತ ಔಟ್​ಲೆಟ್​ಗಳಲ್ಲಿ ಡಿಜಿಟಲ್ ಮೋಡ್​ನಲ್ಲೇ ಪಾವತಿ ಮಾಡಬೇಕಾಗುತ್ತದೆ.

    ಶತ್ರು ರಾಷ್ಟ್ರಗಳ ದಾಳಿ ತಡೆಗೆ ಗಡಿಯಲ್ಲಿ ಲೋಕಾರ್ಪಣೆಗೊಂಡಿತು 44 ಸೇತುವೆ

    ಕಪ್ಪು ಬಣ್ಣದ ಭೀತಿಯಲ್ಲಿ ಪಾಕ್​ ಗಡಗಡ: 21ನೇ ತಾರೀಖು ಮುಹೂರ್ತ ಫಿಕ್ಸ್​? ವಿನಾಶದಿಂದ ಹೊರಬರಲು ಸರ್ಕಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts