ಕೇಂದ್ರ ಸರ್ಕಾರದಿಂದ ಕೃಷಿಕರಿಗೆ ಶೀಘ್ರವೇ ಗುಡ್‌ನ್ಯೂಸ್‌: ಸಿಗಲಿದೆ 10 ಸಾವಿರ ರೂ?

kissan
Published on

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಈ ವರ್ಷದ ಅಂದರೆ 2021ರ ಬಜೆಟ್‌ ಮುಖ್ಯವಾಗಿ ಕೃಷಿಕರ ಕೇಂದ್ರೀಕೃತವಾಗುವ ನಿರೀಕ್ಷೆ ಇದೆ.

ಈ ಹಿನ್ನೆಲೆಯಲ್ಲಿ ಸರ್ಕಾರ, ಕೃಷಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 1 ರಂದು ಬಜೆಟ್‌ ಮಂಡನೆಯಾಗಲಿದ್ದು, ಮಂಡನೆಯಾಗಲಿರುವ ಕೇಂದ್ರ ಬಜೆಟ್‌ನಲ್ಲಿ ಕೃಷಿ ಸಮ್ಮಾನ್ ಮೊತ್ತ 10 ಸಾವಿರ ರೂಪಾಯಿಗೆ ಏರಿಕೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಸದ್ಯ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಆರು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ಅದನ್ನು 10 ಸಾವಿರ ರೂಪಾಯಿಗೆ ಏರಿಕೆ ಮಾಡುವ ಎಲ್ಲಾ ಸಾಧ್ಯತೆಗಳೂ ಇವೆ. ರೈತರು ಹಾಗೂ ಕೃಷಿ ವಲಯವನ್ನು ಕೇಂದ್ರೀಕರಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಬಜೆಟ್ ಮಂಡಿಸಲಿದ್ದು, ಅಂದು ಈ ಹೆಚ್ಚುವರಿ ಸಹಾಯಧನದ ಕುರಿತು ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ನೀಡಲಾಗುತ್ತಿರುವ 6 ಸಾವಿರ ರೂ. ಮೊತ್ತ ಅತ್ಯಂತ ಕಡಿಮೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುವುದಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮೊತ್ತ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net