ಗ್ರಾಮ ಪಂಚಾಯಿತಿ ಫೈಟ್​: ಬಿಜೆಪಿಗೆ ಭರ್ಜರಿ ಮುನ್ನಡೆ

election-BJP
Published on

ಬೆಂಗಳೂರು: ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 82,616 ಸ್ಥಾನಗಳಿಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಇನ್ನೇನು ಕೆಲವೇ ಗಂಟೆಗಳಲ್ಲಿ ಸಿಗಲಿದೆ.

ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಸದ್ಯ ಅರ್ಧಕ್ಕಿಂತ ಹೆಚ್ಚು ಫಲಿತಾಂಶಗಳು ಪ್ರಕಟಗೊಂಡಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ರಾತ್ರಿಯ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ.

ಇದುವರೆಗೆ ಸಿಕ್ಕಿರುವ ಫಲಿತಾಂಶದ ಪೈಕಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಎರಡನೆಯ ಸ್ಥಾನದಲ್ಲಿ ಕಾಂಗ್ರೆಸ್ ಹಾಗೂ ಮೂರನೇ ಸ್ಥಾನದಲ್ಲಿ ಜೆಡಿಎಸ್​ ಇರುವುದಾಗಿ ತಿಳಿದುಬಂದಿದೆ.

ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿರುವ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಟ್ವೀಟ್​ ಮಾಡಿದ್ದಾರೆ. 82616 ವಾರ್ಡ್​ಗಳ ಪೈಕಿ ಬಿಜೆಪಿ ಬೆಂಬಲಿತರು  ಭರ್ಜರಿ ಮುನ್ನಡೆ ಸಾಧಿಸಿದ್ದು, ಇದಾಗಲೇ 5344 ವಾರ್ಡ್​ಗಳಲ್ಲಿ  ಜಯಭೇರಿ ಬಾರಿಸಿರುವುದಾಗಿ ತಿಳಿಸಿದ್ದಾರೆ. ಇವರಿಗೆಲ್ಲಾ ತಮ್ಮ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಕರೊನಾ ವೈರಸ್​ ಹಿನ್ನೆಲೆಯಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಮತದಾನ ಆಗಿರುವ ಕಾರಣ, ಸ್ವಲ್ಪ ನಿಧಾನವಾಗಿ ಮತ ಎಣಿಕೆ ನಡೆಯುತ್ತಿದ್ದು, ರಾತ್ರಿಯ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net