ಗೋದಾಮಿನಲ್ಲಿ ಪ್ರಬಲ ಸ್ಫೋಟ: 9 ಸಾವು- ಪ್ರಧಾನಿ ಸಂತಾಪ

gowdown
Published on

ಅಹಮದಾಬಾದ್ (ಗುಜರಾತ್‌): ಗುಜರಾತ್‌ನ ಅಹಮದಾಬಾದ್‌ನ ರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಸ್ಫೋಟಗೊಂದು ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಗೋದಾಮಿಗೆ ಹೊಂದಿಕೊಂಡಿದ್ದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ. ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶವಾದ ಪಿರಾನಾದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವ 14 ಮಂದಿಯನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಎಂಎಫ್ ದಸ್ತೂರ್ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದಾಗ 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಗೋದಾಮಿನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪ್ರಾಥಮಿಕ ತನಿಖೆಯನ್ನು ಆರಂಭಿಸಿರುವುದಾಗಿ ಉಪ ಪೊಲೀಸ್ ಆಯುಕ್ತ ಅಶೋಕ್ ಮುನಿಯಾ ಹೇಳಿದ್ದಾರೆ.

ಪ್ರಧಾನಿ ಸಂತಾಪ:

ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಗಾಯಾಳುಗಳು ಅದಷ್ಟು ಬೇಗ ಗುಣಮುಖವಾಗಲಿ ಎಂದು ಪ್ರಾರ್ಥಸಿರುವ ಪ್ರಧಾನಿಯವರು, ಅಧಿಕಾರಿಗಳು ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net