More

    ಗುಲಾಬ್‌ ಚಂಡಮಾರುತ: ಮೀನುಗಾರರು ನಾಪತ್ತೆ- ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಗುಲಾಬ್ ಚಂಡಮಾರುತ ಸೃಷ್ಟಿಯಾಗಿದ್ದು, ಅದರ ಪರಿಣಾಮ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
    ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಭಾರೀ ಮಳೆಗೆ ಕಾರಣವಾಗುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು. ಈಗ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆ ಮಳೆಯ ಮುನ್ನೆಚ್ಚರಿಕೆ ಕೊಟ್ಟಿದೆ.

    ಈಗಾಗಲೇ ಬಂಗಾಳ ಕೊಲ್ಲಿಗೆ ಗುಲಾಬ್ ಚಂಡ ಮಾರುತ ಅಪ್ಪಳಿಸಿದ್ದು, ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 1ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ,
    ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತಿತ್ತು, ಆದರೆ ನಿನ್ನೆ ಕೊಂಚ ಬಿಡುವು ಪಡೆದ ಹಾಗಿತ್ತು. ಆದರೆ ಇಂದು ಮತ್ತು ನಾಳೆ ಮಳೆಯ ಸಾಧ್ಯತೆ ಇದೆ.

    ಕರ್ನಾಟಕ ಮಾತ್ರವಲ್ಲದೇ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಲಕ್ಷದ್ವೀಪ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಸಹ ಮಳೆಯಾಗುವ ಸೂಚನೆಯಲ್ಲಿ ಹವಾಮಾನ ಇಲಾಖೆ ನೀಡಿದೆ. ಈ ನಡುವೆಯೇ, ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಲಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್‌ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಗುಲಾಬ್​ ಚಂಡಮಾರುತದ ವೇಗ ಗಂಟೆಗೆ 70-80 ಕಿ.ಮೀ. ಇರಲಿದೆ. ಚಂಡಮಾರುತ ಹಾದುಹೋಗಲಿರುವ ಕಾಳಿಂಗಪಟ್ಟಣಂ, ವಿಶಾಖಪಟ್ಟಣಂ ಮತ್ತು ಗೋಪಾಲಪುರಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ನಟನ ಒಳ ಉಡುಪು ನೋಡಲು ಹೀಗೆಲ್ಲಾ ಮಾಡ್ತಾರಾ ರಶ್ಮಿಕಾ? ಛೇ ಎಂದ ಅಭಿಮಾನಿಗಳು

    ಬಸ್ಸಿನಲ್ಲಿ ನಿದ್ದೆಗೆ ಜಾರಿ ಕೈಕಳೆದುಕೊಂಡ ವ್ಯಾಪಾರಿ: ಹಾವೇರಿಯಲ್ಲಿ ಭಯಾನಕ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts