ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ- ಮೂವರ ಸಾವು- ಕೆಲಸಗಾರರ ಸ್ಥಿತಿ ಚಿಂತಾಜನಕ

karkhane
Published on

ಕರ್ನಲ್ : ಹರಿಯಾಣದ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿರುವುದಾಗಿ ವರದಿಯಾಘಿದೆ.

ಕರ್ನಲ್‌ನಲ್ಲಿ ಇರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಕಾರ್ಖಾನೆಯಲ್ಲಿ ಕಾರ್ಮಿಕರು ಅತ್ಯಧಿಕ ಪ್ರಮಾಣದಲ್ಲಿ ಇಲ್ಲದಿದ್ದುದರಿಂದ ಭಾರ ಅನಾಹುತ ತಪ್ಪಿದೆ. ಆದರೆ ಕೆಲಸ ಮಾಡುತ್ತಿದ್ದ ಮೂವರು ಅಗ್ನಿಗೆ ಆಹುತಿಯಾಗಿದ್ದು, ಕೆಲಸ ನಿರ್ವಹಿಸುತ್ತಿದ್ದ ಕೆಲ ಕೆಲಸಗಾರರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮೃತರನ್ನು ಇನ್ನೂ ಗುರುತಿಸಲಾಗಲಿಲ್ಲ ಮತ್ತು ಇವರೆಲ್ಲರೂ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಾಗಿದ್ದರು ಎಂದು ಪೊಲೀಸ್ ಅಧೀಕ್ಷಕ ಗಂಗಾರಾಮ್ ಪುನಿಯ ತಿಳಿಸಿದ್ದಾರೆ.

ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಫೋಟದಿಂದಾಗಿ ಕಾರ್ಖಾನೆಯ ಬಹುಭಾಗಹಾನಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮೃತಪಟ್ಟವರ ಕುಟುಂಬಸ್ಥರಿಗೆ ಮಾಹಿತಿ ತಲುಪಿಸಿದ್ದೇವೆ. ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net