More

    ‘ಕೆಟ್ಟ ಶಿಕ್ಷಣ ವ್ಯವಸ್ಥೆಗೆ ನನ್ನ ಸಾವೇ ಉದಾಹರಣೆಯಾಗ್ಲಿ, ಇಂಜಿನಿಯರಿಂಗ್‌ ಮಾಡಿದ್ರೆ ಇಷ್ಟೇ ಗತಿ…’ ಹಾಸನದ ವಿದ್ಯಾರ್ಥಿ ಆತ್ಮಹತ್ಯೆ

    ಹಾಸನ: ಇಂದಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ ಎನ್ನುವ ಬಗ್ಗೆ ಎಲ್ಲೆಡೆ ಮಾತು ಕೇಳಿಬರುತ್ತಿರುವ ನಡುವೆಯೇ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ. 13 ನಿಮಿಷಗಳ ವಿಡಿಯೋ ಮಾಡಿಟ್ಟ ಈತ ತನ್ನ ಸಾವಿಗೆ ಈ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದಿದ್ದು, ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಎಂದಿದ್ದಾನೆ.

    ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಹೇಮಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಅರಸೀಕೆರೆ ತಾಲೂಕಿನ ಹಿರಿಯಾಳು ನಿವಾಸಿ ಎನ್ನಲಾಗಿದೆ.

    ಸಾಯುವ ಮುನ್ನ ವಿಡಿಯೋ ಮಾಡಿರುವ ಹೇಮಂತ್‌, ಅದರಲ್ಲಿ ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾನೆ.

    ವಿಡಿಯೋದಲ್ಲಿ ಏನಿದೆ?
    ನನ್ನಪ್ಪ ಶಿಕ್ಷಕರು. ಅವರ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಧನೆ ಮಾಡಿದ್ದಾರೆ. ಏಕೆಂದರೆ ಹಿಂದಿನ ಶಿಕ್ಷಣ ವ್ಯವಸ್ಥೆ ಹಾಗಿತ್ತು. ಅಲ್ಲಿ ಎಲ್ಲವೂ ಸಾಧ್ಯವಿತ್ತು. ಆದರೆ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಸಾಧ್ಯವೇ ಇಲ್ಲ. ಈಗಿನ ಶಿಕ್ಷಣ ವ್ಯವಸ್ಥೆ ಹೇಗಿದೆ ಎಂದರೆ ಇಂಜಿನಿಯರಿಂಗ್ ವಿದ್ಯಾರ್ಥಿ ಸೈಬರ್ ಸೆಂಟರ್​ನಲ್ಲಿ ಕೆಲಸ ಮಾಡಬಹುದು ಅಷ್ಟೇ. ಈ ಬಗ್ಗೆ ಮುಖ್ಯಮಂತ್ರಿ, ಶಿಕ್ಷಣ ಇಲಾಖೆ ಎಲ್ಲರೂ ಚಿಂತಿಸಬೇಕಿದೆ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗಲೇಬೇಕಿದೆ. ನನ್ನ ಬಲಿದಾನ ಎಲ್ಲರಿಗೂ ದಾರಿ ದೀಪವಾಗಲಿ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

    ನನ್ನ ಸುಟ್ಟರೆ ಬೂದಿಯಾಗುತ್ತೆ, ಮಣ್ಣು ಮಾಡಿದರೆ ಕೊಳೆಯುತ್ತೆ. ಆದ್ದರಿಂದ ನನ್ನ ಅಂಗಾಂಗ ದಾನ ಮಾಡಿ. ನನ್ನ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಹಾಗೂ ಆದಿ ಚುಂಚನಗಿರಿ ಶ್ರೀಗಳು ಬರಬೇಕು ಎಂದು ವಿಡಿಯೋದಲ್ಲಿ ಯುವಕ ಹೇಳಿದ್ದಾನೆ. ಜಗದ್ಗುರು ಶ್ರೀ ನಿರ್ಮಲಾನಂಧನಾಥ ಸ್ವಾಮೀಜಿ ಆಶೀರ್ವಾದ ಪಡೆಯುವುದು ನನ್ನ ಜೀವನದ ಆಸೆಯಾಗಿತ್ತು ಎಂದಿದ್ದಾನೆ.

    ಇಂದಿನ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಯಾರದ್ದಾದರೂ ಬಲಿದಾನ ಆಗಲೇ ಬೇಕಿತ್ತು. ನನ್ನ ಸಾವು ವ್ಯರ್ಥವಾಗಲ್ಲ. ನಾನು ಬದಲಾವಣೆಗೆ ಬುನಾದಿ ಹಾಕುವ ಕೆಲಸ ಮಾಡಿದ್ದೇನೆ ಎಂದಿರುವ ಹೇಮಂತ್‌ ಈ ವಿಡಿಯೋವನ್ನು ನ್ಯೂಸ್ ಚಾನೆಲ್​, ಟ್ವಿಟರ್, ಫೇಸ್ ಬುಕ್, ವಾಟ್ಸ್‌ಆ್ಯಪ್‌ನಲ್ಲಿ ಪ್ರಸಾರ ಮಾಡಿ. ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ವಿಡಿಯೋ ಅಪ್‌ಲೋಡ್ ಮಾಡಿ, ಎಲ್ಲರೂ ಈ ವಿಡಿಯೋವನ್ನು ನೋಡಲಿ ಎಂದಿದ್ದಾನೆ.

    ಜತೆಗೆ ಅಪ್ಪ- ಅಮ್ಮನನ್ನು ಉದ್ದೇಶಿಸಿ, ಐ ಲವ್ ಯೂ, ನಾನು ನಿಮ್ಮನ್ನ ಮಿಸ್ ಮಾಡಿಕೊಳ್ತೀನಿ ಎಂದಿರುವ ಹೇಮಂತ್‌, ನನ್ನ ಸಾವಿನ ನಂತರ ಅಪ್ಪ ಅಮ್ಮ ಇಬ್ಬರು ಅನಾಥ ಮಕ್ಕಳನ್ನ ದತ್ತು ಪಡೆದು ಸಾಕಿ. ಆ ಇಬ್ಬರಲ್ಲಿ ನಾನು ಇರುತ್ತೇನೆ ಎಂದಿದ್ದಾನೆ.

    ಅರ್ಧ ಪರೀಕ್ಷೆ ಬರೆದ ಮೇಲೆ ಪ್ರಶ್ನೆ ಪತ್ರಿಕೆ ಬದಲಾಯಿಸಿದರು! ಕಾನ್‌ಸ್ಟೆಬಲ್‌ ಪರೀಕ್ಷೆಯಲ್ಲಿ ಎಡವಟ್ಟು

    ಜಾಮೀನು ಸಿಕ್ಕಿಲ್ಲ, ಯಾರೂ ಕೈಹಿಡಿದಿಲ್ಲ: ಜೈಲಲ್ಲಿ ಶ್ರೀರಾಮನ ಮೊರೆ ಹೋದ ಶಾರುಖ್‌ ಪುತ್ರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts