ಮಂಡ್ಯ ಜಿಲ್ಲೆಯಲ್ಲಿ ಮಳೆಯ ಆರ್ಭಟ: ಎಲ್​ಕೆಜಿಯಿಂದ 10ನೇ ತರಗತಿಯವರೆಗೆ ರಜೆ ಘೋಷಣೆ

rain
ಸಾಂದರ್ಭಿಕ ಚಿತ್ರ
Published on

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ವರುಣದ ಆರ್ಭಟ ಜೋರಾಗಿದೆ. ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಎಲ್‌ಕೆಜಿ, ಯುಕೆಜಿ ಸೇರಿದಂತೆ ಒಂದರಿಂದ ಹತ್ತನೇ ತರಗತಿವರೆಗೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಇಂದು (ಸೋಮವಾರ) ರಜೆ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ಕೂಡ ಮಳೆಯ ಆರ್ಭಟ ಜೋರಾಗಿದ್ದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net