More

    ಹಿಜಾಬ್‌: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್‌- ಅಲ್ಲಿಯವರೆಗೂ ಶಾಲೆಗಳಲ್ಲಿ ಧಾರ್ಮಿಕ ವಸ್ತ್ರ ಬ್ಯಾನ್‌

    ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ (ಮಂಗಳವಾರ) ಮುಂದೂಡಿದೆ. ವಿಚಾರಣೆ ಮುಗಿಯುವವರೂ ಈಗಾಗಲೇ ತಾನು ನೀಡಿರುವ ನಿರ್ದೇಶನದಂತೆ ವಸ್ತ್ರ ಸಂಹಿತೆ ಜಾರಿ ಮಾಡಿರುವ ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

    ಧಾರ್ಮಿಕ ವಸ್ತ್ರ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ದಾಖಲಿಸಿರುವ ಅರ್ಜಿಗಳ ವಿಚಾರಣೆಯನ್ನು ತ್ರಿಸದಸ್ಯ ಪೀಠ ನಡೆಸುತ್ತಿದೆ. ಈ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನಿ ಇದ್ದಾರೆ. ಇಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಲಿದ್ದಾರೆ.

    ಇದೇ ವೇಳೆ, ಮುಖ್ಯ ನ್ಯಾಯಮೂರ್ತಿಗಳು ಮಾಧ್ಯಮಗಳಿಗೂ ಕಿವಿಮಾತು ಹೇಳಿದ್ದಾರೆ. ನೀವು ಸಂವಿಧಾನದ ನಾಲ್ಕನೇ ಅಂಗವಾಗಿದ್ದು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ನೀವು ಸಹಕರಿಸಬೇಕು ಎಂದಿದ್ದಾರೆ.

    VIDEO: ‘ಅಲ್ಲಾಹು ಅಕ್ಬರ್‌’: ಘಟನೆ ಪೂರ್ವನಿಯೋಜಿತ ಎಂದ ಪಾಕಿಸ್ತಾನದ ಚಾನೆಲ್‌! ಶಾಕಿಂಗ್‌ ವಿಡಿಯೋ ಇಲ್ಲಿದೆ…

    ರೇಪ್‌ಗೂ ಹಿಜಾಬ್‌ಗೂ ಸಂಬಂಧ ಕಲ್ಪಿಸಿ ಉಲ್ಟಾ ಹೊಡೆದ ಜಮೀರ್‌: ಮುಜುಗರದಲ್ಲಿ ಕಾಂಗ್ರೆಸ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts