More

    ಹೋಳಿ ಹಬ್ಬದ ನಂತರ ಹಿಜಾಬ್​ ಭವಿಷ್ಯ: ಸದ್ಯ ಅರ್ಜೆಂಟಿಲ್ಲ ಎಂದ ಸುಪ್ರೀಂಕೋರ್ಟ್​

    ನವದೆಹಲಿ: ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಾ.15ರಂದು ತೀರ್ಪು ನೀಡುತ್ತಿದ್ದಂತೆಯೇ ಈ ತೀರ್ಪನ್ನು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.

    ಹಿಜಾಬ್ ಧರಿಸಿವುದು ಮುಸ್ಲಿಂ ಮಹಿಳೆಯರ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಕುರಿತು ಸರ್ಕಾರ ನೀಡಿದ ಆದೇಶ ಕಾನೂನುಬದ್ಧವಾಗಿದೆ. ಫೆಬ್ರವರಿ 5ರಂದು ಸರ್ಕಾರ ನೀಡಿದ ಆದೇಶವನ್ನು ಅಮಾನ್ಯಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ಹೇಳಿದೆ. ಇದನ್ನು ಸುಪ್ರೀಂಕೋರ್ಟ್​ನಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

    ಇದರ ವಿಚಾರಣೆ ತುರ್ತಾಗಿ ನಡೆಯಬೇಕಿರುವ ಹಿನ್ನೆಲೆಯಲ್ಲಿ, ಕೂಡಲೇ ವಿಚಾರಣೆ ನಡೆಸಿ ಎಂದು ಮೇಲ್ಮನವಿದಾರರ ಪರ ವಕೀಲರು ಸುಪ್ರೀಂಕೋರ್ಟ್​ ಅನ್ನು ಕೋರಿದ್ದರು. ಸೋಮವಾರದಿಂದ ಪರೀಕ್ಷೆ ಶುರುವಾಗಲಿರುವ ಹಿನ್ನೆಲೆಯಲ್ಲಿ ಕೂಡಲೇ ಅರ್ಜಿಯ ವಿಚಾರಣೆ ನಡೆಸಿ ಎಂದು ವಕೀಲರು ಕೋರಿದರು. ಆದರೆ ಸುಪ್ರೀಂಕೋರ್ಟ್​ ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲು ತಿರಸ್ಕರಿಸಿದ್ದು, ಹೋಳಿ ಹಬ್ಬ ಮುಗಿದ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

    ಈ ನಡುವೆಯೇ ಹಿಂದೂ ಸೇನಾದ ಅಧ್ಯಕ್ಷ ಸುರ್ಜಿತ್ ಯಾದವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸುವ ಪೂರ್ವದಲ್ಲಿ ತಮ್ಮ ವಾದವನ್ನೂ ಆಲಿಸಬೇಕು ಎಂದು ಅವರು ಕೋರಿದ್ದಾರೆ.

    ಮದ್ವೆಯಾಗೋದಾಗಿ ಹೇಳಿ ರೇಪ್​: ದುಬಾರಿ ಗಿಫ್ಟ್​ ಪಡೆದು ಸ್ಯಾಂಡಲ್​ವುಡ್​ ನಟಿಯ ಅಣ್ಣ ಎಸ್ಕೇಪ್​?

    ಯೂಕ್ರೇನ್‌ನಿಂದ 800 ಭಾರತೀಯರನ್ನು ರಕ್ಷಿಸಿದ ಯುವತಿ: ಬಿಜೆಪಿ ಮುಖಂಡೆಯ ಪುತ್ರಿಗೆ ಶ್ಲಾಘನೆಗಳ ಮಹಾಪೂರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts