More

    ರಕ್ಷಣಾ ತಂತ್ರಜ್ಞಾನದಲ್ಲಿ ಭಾರತದ ಮೈಲಿಗಲ್ಲು: ಆತ್ಮನಿರ್ಭರ​ ಭಾರತದತ್ತ ದಿಟ್ಟ ಹೆಜ್ಜೆ

    ಒಡಿಶಾ: ಹೈಪರ್​ಸಾನಿಕ್​ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್ (ಎಚ್‌ಎಸ್‌ಟಿಡಿವಿ) ಹಾರಾಟ ಪರೀಕ್ಷೆಯನ್ನು ಭಾರತ ನಡೆಸಿದ್ದು, ಈ ಮೂಲಕ ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.

    ಒಡಿಶಾದ ಕರಾವಳಿ ತೀರ ಪ್ರದೇಶದಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಹಾರಾಟ ನಡೆದಿದೆ.

    ಇದರೊಂದಿಗೆ ಎಚ್‌ಎಸ್‌ಟಿಡಿವಿ ಹಾರಾಟವನ್ನು ಯಶಸ್ವಿಯಾಗಿ ನಡೆಸಿದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆ ಗಳಿಸಿದೆ. ಈ ಮೊದಲು ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ವಿ ಹಾರಾಟ ನಡೆಸಿವೆ. ಈ ದೇಶಿ ತಂತ್ರಜ್ಞಾನವು ಶಬ್ದದ ಆರು ಪಟ್ಟು ವೇಗದಲ್ಲಿ (ಮ್ಯಾಕ್- 6) ಚಲಿಸುವ ಕ್ಷಿಪಣಿಗಳ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ. ಕೇವಲ 20 ಸೆಕೆಂಡ್​ಗಳಲ್ಲಿ 32.5 ಕಿ.ಮೀ. ಎತ್ತರಕ್ಕೆ ಚಲಿಸಬಲ್ಲ ಸಾಮರ್ಥ್ಯವನ್ನು ಇದು ಹೊಂದಿದೆ.

    ಇದನ್ನೂ ಓದಿ: ಶಿಕ್ಷಕಿ ದೇಣಿಗೆ ಕೇಳಿದರೆ, ಅವರಿಂದಲೇ ₹48 ಲಕ್ಷ ದೋಚಿದ ಭೂಪ- ನಿಮಗೂ ಇದು ಪಾಠ!

    ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಇದನ್ನು ಅಭಿವೃದ್ಧಿಪಡಿಸಿದೆ. ಪರೀಕ್ಷೆಯ ನೇತೃತ್ವವನ್ನು ಡಿಆರ್‌ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಮತ್ತು ಅವರ ಹೈಪರ್ಸಾನಿಕ್ ಕ್ಷಿಪಣಿ ತಂಡ ವಹಿಸಿತ್ತು.

    ಬೆಳಗ್ಗೆ 11.03ಕ್ಕೆ, ಅಗ್ನಿ ಕ್ಷಿಪಣಿಯು ಎಚ್‌ಎಸ್‌ಟಿಡಿವಿಯನ್ನು 30 ಕಿ.ಮೀ ಎತ್ತರಕ್ಕೆ ಕೊಂಡೊಯ್ದಿತು, ಇದು 2500 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ದಹನ ತಾಪಮಾನವನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದು, ಗಾಳಿಯ ವೇಗವನ್ನು ಒಳಗೊಂಡಂತೆ ಎಲ್ಲಾ ರೀತಿಯಲ್ಲಿಯೂ ಇದು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ ಎಂದು ತಂಡ ಹೇಳಿದೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪರೀಕ್ಷೆಯ ನಂತರ ಡಿಆರ್‌ಡಿಒಗೆ ಅಭಿನಂದನೆ ಸಲ್ಲಿಸಿ ಅದರ ಕಾರ್ಯವನ್ನು ಶ್ಲಾಘಿಸಿದರು. ‘ಆತ್ಮನಿರ್ಭರ ಭಾರತ’ದ ಹೆಗ್ಗುರುತು ಇದು ಎಂದು ಹೇಳಿದರು.

    ನಟಿ ಕಂಗನಾಗೆ ಕೇಂದ್ರದಿಂದ ‘ವೈ ಪ್ಲಸ್’​ ಭದ್ರತೆ: ಏನಿದರ ವಿಶೇಷತೆ?

     

    ಚಿಕ್ಕಮಗಳೂರು: ಕರೊನಾದಿಂದ ಮೃತಪಟ್ಟ ಅಪ್ಪನ ಅಂತ್ಯಕ್ರಿಯೆ ನಡೆಸಿ ಮಾದರಿಯಾದ ಮಗಳು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts