ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಥಾನಕ್ಕೆ ಇಮರ್ತಿದೇವಿ ರಾಜೀನಾಮೆ

ದಾಬ್ರಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿದ್ದ ಇಮರ್ತಿ ದೇವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.’ ಉಪಚುನಾವಣೆಯಲ್ಲಿ ಮಧ್ಯಪ್ರದೇಶದ ದಾಬ್ರಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಸೋತಿದ್ದರು. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಬಿಜೆಪಿಗೆ ಬಂದಿದ್ದ ಇಮರ್ತಿದೇವಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಕಾಂಗ್ರೆಸ್​ನ ಸುರೇಶ್ ರಾಜೆ ವಿರುದ್ಧ ಸೋತಿದ್ದಾರೆ. ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಜ್ಯೋತಿರಾಡಿತ್ಯ ಸಿಂಧಿಯಾ ಅವರೊಂದಿಗೆ ಬಿಜೆಪಿಗೆ ಸೇರಿದ 22 ಶಾಸಕರಲ್ಲಿ ಇಮರ್ತಿ ದೇವಿ ಕೂಡ ಒಬ್ಬರು. … Continue reading ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಥಾನಕ್ಕೆ ಇಮರ್ತಿದೇವಿ ರಾಜೀನಾಮೆ