More

    ರೈಲು ವಿಳಂಬದಿಂದ ಕೆಪಿಎಸ್‌ಸಿ ಪರೀಕ್ಷೆ ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

    ಕಲಬುರಗಿ: ಕೆಪಿಎಸ್‌ಸಿಯಿಂದ ನಡೆಯುತ್ತಿರುವ ಸಹಾಯಕ ಇಂಜಿನಿಯರ್‌ ಮತ್ತು ಕಿರಿಯ ಇಂಜಿನಿಯರ್‌ ಪರೀಕ್ಷೆಗೆ ರೈಲು ವಿಳಂಬದಿಂದ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಸರ್ಕಾರ ಮಹತ್ವದ ಸೂಚನೆ ನೀಡಿದೆ.

    ಹಾಸನ ಸೊಲ್ಲಾಪುರ ಎಕ್ಸ್‌ಪ್ರೆಸ್​ ರೈಲು ವಿಳಂಬವಾದ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಸಿಗದೆ ಪರದಾಡುವಂತಾಗಿದೆ. ಮುಂಜಾನೆ ಆರು ಗಂಟೆಗೆ ಕಲಬುರಗಿಗೆ ಬರಬೇಕಿದ್ದ ರೈಲು ಐದು ಗಂಟೆ ವಿಳಂಬವಾಗಿ ಕಲಬುರಗಿಗೆ ತಲುಪುವ ಸಾಧ್ಯತೆ ಇರುವ ಕಾರಣ, ಕಲಬುರಗಿಯಲ್ಲಿರುವ ಪರೀಕ್ಷೆ ಕೇಂದ್ರಕ್ಕೆ ಬರಲು ಸಾಧ್ಯವಾಗದೆ ಅಭ್ಯರ್ಥಿಗಳು ಪರದಾಟ ನಡೆಸಿದ್ದಾರೆ. ಇದರಿಂದ ಬೆಳಗ್ಗಿನ ಪರೀಕ್ಷೆಯನ್ನು ತಪ್ಪಿಸಿಕೊಂಡಿದ್ದಾರೆ. ಇದಕ್ಕೆ ಅವರು ಕೆಪಿಎಸ್‌ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ಯಲಹಂಕ ಬಳಿ ರೈಲು ಹಳಿ ದುರಸ್ಥಿ ಕಾರ್ಯ ಇದ್ದಿದ್ದರಿಂದ ಯಲಹಂಕ ಬಳಿ ಎರಡು ಗಂಟೆ ರೈಲು ನಿಂತಲ್ಲಿಯೇ ನಿಂತಿತ್ತು. ಯಲಹಂಕ ದಾಟಿದ ಮೇಲೆ ಕೂಡ ಅನೇಕ ಕಡೆ ರೈಲು ನಿಂತಿದ್ದರಿಂದ, ನಿಗದಿತ ಸಮಯಕ್ಕಿಂತ ಐದು ಗಂಟೆ ವಿಳಂಬವಾಗಲು ಪ್ರಮುಖ ಕಾರಣವಾಗಿದೆ.

    ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಕೆಪಿಎಸ್‌ಸಿ, ಅಭ್ಯರ್ಥಿಗಳು ಈಗ ಪ್ರತಿಭಟನೆ ನಡೆಸುವುದು ಸರಿಯಲ್ಲ. ಏಕೆಂದರೆ ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಒಂದು ವಾರಕ್ಕೂ ಮೊದಲೇ ಪ್ರಕಟಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳನ್ನು ಹಿಂದಿನ ದಿನವೇ ನೋಡಿಕೊಳ್ಳುವಂತೆ ಸ್ಪಷ್ಟ ಸೂಚನೆ ನೀಡಲಾಗಿತ್ತು. ಅಭ್ಯರ್ಥಿಗಳು ಈ ಸೂಚನೆ ಉಲ್ಲಂಘಿಸಿ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಬರುವಂತೆ ಪ್ರಯಾಣ ಮಾಡಿದ್ದಾರೆ.

    ಆದರೂ ಅಭ್ಯರ್ಥಿಗಳ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ’ರೈಲು ವಿಳಂಬದಿಂದ ಪರೀಕ್ಷೆ ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಮಾತ್ರ’ ಅನ್ವಯ ಆಗುವಂತೆ ಬೇರೆ ವ್ಯವಸ್ಥೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳೂ ಮಧ್ಯಾಹ್ನ ನಡೆಯುವ ಪರೀಕ್ಷೆಗೆ ಕೂಡಲೇ ಹಾಜರು ಇರಬೇಕು ಎಂದು ಸೂಚಿಸಲಾಗಿದೆ.

    ರೆವಿನ್ಯೂ ದಾಖಲೆ ಅಪ್ಪ ವರ್ಗಾವಣೆ ಮಾಡಿದ ಮಾತ್ರಕ್ಕೆ ಮಗ ಆ ಆಸ್ತಿ ಮಾಲೀಕನಾಗಲ್ಲ

    ಪೂರ್ಣಚಂದ್ರ ತೇಜಸ್ವಿ ಪತ್ನಿ ಇನ್ನಿಲ್ಲ- ‘ನನ್ನ ತೇಜಸ್ವಿ’ ಮೂಲಕ ಮನೆಮಾತಾಗಿದ್ದ ರಾಜೇಶ್ವರಿ ಅಮ್ಮಾ: ದೇಹದಾನಕ್ಕೆ ಸಿದ್ಧತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts