ಐಪಿಎಲ್​ ಕ್ರಿಕೆಟ್​ ಬೆಟ್ಟಿಂಗ್​ ಸುಳಿಯಲ್ಲಿ ಶಾಸಕರ ಪತ್ನಿ!

betting
Published on

ಕಲಬುರಗಿ: ಐಪಿಎಲ್​ ಕ್ರಿಕೆಟ್​ ಬೆಟ್ಟಿಂಗ್​ಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇದುವರೆಗೂ ಅನೇಕ ಮಂದಿಯ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದಾರೆ.

ಅದರಂತೆ ಕಲಬುರಗಿಯಲ್ಲಿಯೂ ಈ ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಈ ಬೆಟ್ಟಿಂಗ್​ನಲ್ಲಿ ಇದೀಗ ಸ್ಥಳೀಯ ಶಾಸಕರ ಪತ್ನಿಯ ಹೆಸರು ಕೇಳಿಬಂದಿದೆ.

ಅಷ್ಟಕ್ಕೂ ಆಗಿರುವುದು ಏನೆಂದರೆ, ಮೂರು ದಿನಗಳ ಹಿಂದೆ ಇಲ್ಲಿಯ ಎಂ.ಬಿ. ನಗರದ ಪ್ರದೇಶದ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸೊಲ್ಲಾಪುರದ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದರು. ಈ ಸಮಯದಲ್ಲಿ ಬೆಟ್ಟಿಂಗ್​ನಲ್ಲಿ ತೊಡಗಿಸಿಕೊಂಡಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬುವವರನ್ನು ಅರೆಸ್ಟ್​ ಮಾಡಿ ಅವರ ಬಳಿ ಇದ್ದ 38.44 ಲಕ್ಷ ರೂಪಾಯಿ ನಗದು, ನಾಲ್ಕು ಲ್ಯಾಪ್‌ಟಾಪ್‌ಗಳು, ಟಿ.ವಿ ಹಾಗೂ ಇನ್ನೋವಾ ಕ್ರಿಸ್ಟಾ ಕಾರು, ಸ್ಕೂಟರ್​ ವಶಕ್ಕೆ ಪಡೆದುಕೊಂಡಿದ್ದರು.

ಇದೀಗ ಆ ಕಾರಿನ ಮಾಹಿತಿ ಕಲೆಹಾಕಿದಾಗ ಕಾರು ಕಲಬುರಗಿಯ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಅವರ ಹೆಸರಿನಲ್ಲಿ ಇರುವುದು ತಿಳಿದಿದೆ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾತ್ರವಲ್ಲದೇ ಈ ಬೆಟ್ಟಿಂಗ್‌ನಲ್ಲಿ ಅನೇಕ ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ತನಿಖೆ ಮುಂದುರಿಸಲಾಗಿದೆ. ಸದ್ಯ ಆರೋಪಿಗಳನ್ನು ‌ಸೊಲ್ಲಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರಿನ ಕುರಿತಾಗಿಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net