More

    ಉಪ ಚುನಾವಣೆ ಎಫೆಕ್ಟ್​! ಕಾಂಗ್ರೆಸ್ ಪ್ರಧಾನ ಕಚೇರಿ ಮೇಲೆ ಐಟಿ ದಾಳಿ: ₹ 8.5 ಲಕ್ಷ ವಶಕ್ಕೆ

    ಪಟ್ನಾ: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಇದೀಗ ಅಕ್ರಮಗಳು ಶುರುವಾಗತೊಡಗಿವೆ. ಮತದಾರರನ್ನು ಓಲೈಸಿಕೊಳ್ಳಲು ಬಗೆಬಗೆ ಆಮಿಷಗಳನ್ನು ಒಡ್ಡಲು ಸದ್ದಿಲ್ಲದೇ ಕೆಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

    ಈ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ಅಧಿಕಾರಿಗಳೂ ಹದ್ದಿನ ಕಣ್ಣು ಇಟ್ಟಿದ್ದಾರೆ. ಇದೀಗ ಬಿಹಾರದ ಕಾಂಗ್ರೆಸ್ ಪ್ರಧಾನ ಕಚೇರಿ ಸದಾಕತ್ ಆಶ್ರಮದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿ ಹಣ ಇಟ್ಟಿರುವ ಕುರಿತಂತೆ ಮಾಹಿತಿ ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಅಧಿಕಾರಿಗಳಿಗೆ ಕಚೇರಿಯ ಆವರಣದ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 8.5 ಲಕ್ಷ ರೂಪಾಯಿ ಪತ್ತೆಯಾಗಿದೆ.

    ಈ ಸಂದರ್ಭದಲ್ಲಿ ಅಶುತೋಷ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವರು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಲಾಗುತ್ತಿದೆ. ಇದರ ಜತೆಗೆ, ಕಾರಿನಲ್ಲಿದ್ದ 8.5 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಇಷ್ಟು ಹಣವನ್ನು ಕಚೇರಿಯ ಬಳಿ ಇಟ್ಟಿದ್ದೇಕೆ ಎಂಬ ಬಗ್ಗೆ ತನಿಖೆ ಶುರು ಮಾಡಲಾಗಿದ್ದಾರೆ.

    ಇದನ್ನೂ ಓದಿ: ಒಬ್ಬಳು ಬದುಕಿದ್ದಾಗ ಇನ್ನೊಂದು ಮದ್ವೆಯಾದ್ರೆ ಎರಡನೇ ಹೆಂಡತಿ ಮಕ್ಕಳಿಗೆ ಆಸ್ತಿ ಸಿಗುತ್ತಾ?

    ಇದೇ ವೇಳೆ ಕಾಂಗ್ರೆಸ್​ ಮುಖಂಡರು ಈ ದಾಳಿಗೆ ಕಿಡಿ ಕಾರಿದ್ದಾರೆ. ಬಿಹಾರ ಚುನಾವಣೆಯಲ್ಲಿ ತಾವು ಸೋಲುತ್ತೇವೆ ಎಂಬುದು ಬಿಜೆಪಿ-ಜೆಡಿಯುಗೆ ತಿಳಿದಿದೆ. ಹೀಗಾಗಿ ಈ ರೀತಿಯ ಕೆಲಸ ಮಾಡುತ್ತಿದೆ. ಯಾರ ಕಾರಿನಿಂದ ಹಣ ವಶಪಡಿಸಿಕೊಳ್ಳಲಾಗಿದೆಯೋ ಅವರು ನಮಗೆ ಸಂಬಂಧವಿಲ್ಲ. ಹಣ ಹಾಗೂ ಕಾರು ಯಾರಿಗೆ ಸೇರಿದ್ದು ಎಂಬುದು ಸಹ ನಮಗೆ ತಿಳಿದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿ ಶಕ್ತಿ ಸಿಂಗ್ ಗೋಹಿಲ್ ಹಾಗೂ ರಾಷ್ಟ್ರೀಯ ಮಿಡಿಯಾ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.

    ಈ ಇಬ್ಬರನ್ನೂ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ ಬೆನ್ನಲ್ಲೇ ಇವರು ಇದೀಗ ತಮಗೂ, ಈ ದುಡ್ಡಿಗೂ ಸಂಬಂಧ ಇಲ್ಲ ಎಂದು ಹೇಳುತ್ತಿದ್ದಾರೆ. ಬಿಜೆಪಿ-ಜೆಡಿಯು ಸರ್ಕಾರದ ಸೂಚನೆ ಮೇರೆಗೆ ಐಟಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

    ಚಿನ್ನ ತಂದರಷ್ಟೇ ಸೀಮಂತ: ಲಕ್ಷ ಲಕ್ಷ ಕೊಟ್ಟರೂ ಮುಗಿಯದ ಧನದಾಹ- ಟೆಕ್ಕಿ‌ ಆತ್ಮಹತ್ಯೆ!

    ಸಿಎಂ ಪಟ್ಟ ಹೋದ್ಮೇಲೆ ಹುಚ್ಚನಂತೆ ಅಲೀತಿದ್ದಾರೆ… ಅವ್ರ ತಾಯಿ, ಸಹೋದರಿ ಐಟಂಗಳಿರಬೇಕು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts