

ಬೆಂಗಳೂರು: ಈ ಬಾರಿಯ ನಾಡಹಬ್ಬ ದಸರಾ ಮೇಲೂ ಕರೊನಾ ಕರಿನೆರಳು ಬಿದ್ದಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ತೀರ್ಮಾನಿಸಿದಂತೆ ಜಂಬೂ ಸವಾರಿ ಅರಮನೆ ಆವರಣದಲ್ಲಿ ಒಳಗೆ ಮಾತ್ರ ಇರಲಿದೆ. ಅರಮನೆಯ ಹೊರಭಾಗದಲ್ಲಿ ಸವಾರಿ ಎಂದಿನಂತೆ ಸವಾರಿ ಇರುವುದಿಲ್ಲ. ಅಂದರೆ, ಈ ಬಾರಿಯ ದಸರಾ, ಚಾಮುಂಡಿ ಬೆಟ್ಟ ಹಾಗೂ ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಿರಲಿದೆ.
ಇದನ್ನೂ ಓದಿ: ಸರಸವಾಡೋಣ ಬಾರೋ ಎಂದು ಈತ ಆತನನ್ನು ಕರೆದ- ಆಮೇಲೇನಾಯ್ತು?
ಈ ಬಾರಿಯ ನಾಡಹಬ್ಬ ದಸರಾವನ್ನು ವಿಶೇಷವಾಗಿ ಕರೊನಾ ವಾರಿಯರ್ಸ್ ಉದ್ಘಾಟನೆ ಮಾಡಲಿದ್ದಾರೆ. ಆದರೆ, ಪ್ರತಿ ಬಾರಿಯಂತೆ ಮಕ್ಕಳ ದಸರಾ, ಮಹಿಳಾ ದಸರಾ, ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ, ಪಂಜಿನ ಕವಾಯತು ಕೂಡ ಈ ಬಾರಿ ನಡೆಯುವುದಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯುವುದಿಲ್ಲ. ಅಷ್ಟೇ ಅಲ್ಲದೇ ಈ ಬಾರಿಯ ದಸರಾ ಮಹೋತ್ಸವದಲ್ಲಿ ಚೀನಿ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.