More

    ‘ಹಿಂದೊಮ್ಮೆ ಎರಡೇ ಸೀಟು ಬಂದಿತ್ತು- ನಂತರ ಸಿಎಂ, ಪಿಎಂ ಸ್ಥಾನ ಸಿಕ್ಕಿತು, ನಿರಾಶರಾಗಬೇಡಿ’

    ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್​.ಆರ್​.ನಗರ) ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ನಂತರ ಜೆಡಿಎಸ್​ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು, ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಧೈರ್ಯ ತುಂಬುವ ಸರಣಿ ಟ್ವೀಟ್​ ಮಾಡಿದ್ದಾರೆ.

    ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದಿರುವ ಕುಮಾರಸ್ವಾಮಿ ಅವರು, ರಾಜ್ಯದ ಎರಡು ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದಿದ್ದಾರೆ.

    ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಹೇಳಿದ್ದಾರೆ.

    ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದಿದ್ದಾರೆ.

    ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ದನ ತೀರ್ಪಿಗೆ ತಲೆಬಾಗಿದ್ದೇನೆ ಎಂದಿದ್ದಾರೆ.

    ಇವಿಎಂ ಅಸಲಿಯತ್ತು: ಕಾಂಗ್ರೆಸ್​ ಸಂಸದ ಕಾರ್ತಿ ಚಿದಂಬರಂ ತಮ್ಮ ಪಕ್ಷದವರಿಗೆ ಹೇಳಿದ್ದೇನು?

    ‘ಜ್ಯೋತಿಷಿಗಳ ಬದಲು ಜನರ ನಾಡಿಮಿಡಿತ ಅರಿತಿದ್ರೆ ಕಾಂಗ್ರೆಸ್​ಗೆ ಹೀಗಾಗ್ತಿರಲಿಲ್ಲ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts