

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿರುವ ಹಲವು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ರಕ್ಷಣಾ ಸಚಿವಾಲಯದ ನಾಗರಿಕ ಸಿಬ್ಬಂದಿ ನಿರ್ದೇಶನಾಲಯ, ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ (ಎಂಸಿಟಿಇ), ಗೃಹ ವ್ಯವಹಾರಗಳ ಸಚಿವಾಲಯದ ಸಮನ್ವಯ ಪೊಲೀಸ್ ವೈರ್ಲೆಸ್ ನಿರ್ದೇಶನಾಲಯ, ಕಾರ್ವಿುಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗ ನಿರ್ದೇಶನಾಲಯ, ಗಣಿ ಸಚಿವಾಲಯದ ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ಇಲಾಖೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರತಿ ಪಡೆದುಕೊಳ್ಳಲು ಡಿ.3 ಕೊನೇ ದಿನ ಎಂದು ತಿಳಿಸಲಾಗಿದೆ.
ಒಟ್ಟು ಹುದ್ದೆಗಳು: 36
ಹುದ್ದೆ ವಿವರ
* ಪ್ರೊಫೆಸರ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್)- 1
* ಅಸೋಸಿಯೇಟ್ ಪ್ರೊಫೆಸರ್ (ಎಲೆಕ್ಟ್ರಾನಿಕ್ಸ್ ಆಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್-3, ಕಂಪ್ಯೂಟರ್ ಇಂಜಿನಿಯರಿಂಗ್/ ಇನ್ಫಮೇಷನ್ ಟೆಕ್ನಾಲಜಿ ಇಂಜಿನಿಯರಿಂಗ್-3) - 6
* ಅಸಿಸ್ಟೆಂಟ್ ಪ್ರೊಫೆಸರ್ (ಎಲೆಕ್ಟ್ರಾನಿಕ್ಸ್ ಆಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್- 7
* ಕಂಪ್ಯೂಟರ್ ಇಂಜಿನಿಯರಿಂಗ್/ ಇನ್ಫಮೇಷನ್ ಟೆಕ್ನಾಲಜಿ ಇಂಜಿನಿಯರಿಂಗ್ -5) - 12
* ಜಂಟಿ ಸಹಾಯಕ ನಿರ್ದೇಶಕ- 3
* ಡೆಪ್ಯುಟಿ ಡೈರೆಕ್ಟರ್ - 6
* ಸೀನಿಯರ್ ಅಸಿಸ್ಟೆಂಟ್ ಕಂಟ್ರೋಲರ್ - 8
ವಿದ್ಯಾರ್ಹತೆ: ಟೆಕ್ನಾಲಜಿ, ಇಂಜಿನಿಯರಿಂಗ್ನಲ್ಲಿ ಪದವಿ/ ಸ್ನಾತಕೋತ್ತರ ಪದವಿ, ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಟೆಲಿಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಇನ್ಫಮೇಷನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್/ ಇನ್ಫಮೇಷನ್ ಆಂಡ್ ಕಮ್ಯುನಿಕೇಷನ್ ಟೆಕ್ನಾಲಜಿ/ ಎಲೆಕ್ಟ್ರಿಕಲ್, ಮೈನಿಂಗ್ ಇಂಜಿನಿಯರಿಂಗ್ನಲ್ಲಿ ಬಿ.ಟೆಕ್/ ಬಿಇ/ ಬಿಎಸ್ಸಿ, ಅರ್ಥಶಾಸ್ತ್ರ/ ಸ್ಟಾ್ಯಟಿಸ್ಟಿಕ್ಸ್/ ಗಣಿತಶಾಸ್ತ್ರ/ ಕಾಮರ್ಸ್/ ಸೈಕಾಲಜಿ/ ಸೋಷಿಯಾಲಜಿ/ ಸೋಷಿಯಲ್ ವರ್ಕ್/ ಪಬ್ಲಿಕ್ ಅಡ್ಮಿನಿಸ್ಟ್ರೇಷನ್/ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಸ್ನಾತಕೋತ್ತರ ಪದವಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ನಲ್ಲಿ ಪಿಎಚ್.ಡಿ ಮಾಡಿರಬೇಕು. ಹುದ್ದೆಗೆ ಅನುಗುಣವಾಗಿ ವೃತ್ತಿ ಅನುಭವ ಕೇಳಲಾಗಿದೆ.
ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ರಿಂದ 53 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 25 ರೂ. ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾದಲ್ಲಿ, ಅಭ್ಯರ್ಥಿಗಳ ಶೈಕ್ಷಣಿಕ ಅಂಕ ಹಾಗೂ ವೃತ್ತಿ ಅನುಭವ ಆಧರಿಸಿ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುವುದು. ನಂತರ ನೇಮಕಾತಿ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಅಥವಾ ಕೇವಲ ಸಂದರ್ಶನ ಮೂಲಕವೂ ಆಯ್ಕೆ ಮಾಡಬಹುದಾಗಿದೆ.
ವೇತನಶ್ರೇಣಿ: ಎಲ್ಲ ಹುದ್ದೆಗಳು ಕೇಂದ್ರದ 7ನೇ ವೇತನ ಆಯೋಗದ 8 ರಿಂದ 14ನೇ ವೇತನ ಶ್ರೇಣಿಯದ್ದಾಗಿವೆ.
ಅರ್ಜಿ ಸಲ್ಲಿಸಲು ಕೊನೇ ದಿನ: 2.12.2021
ಅಧಿಸೂಚನೆಗೆ: https://bit.ly/3DjNIdd
ಮಾಹಿತಿಗೆ: http://www.upsc.gov.in