

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಸೆಂಟರ್ ಫಾರ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಆಂಡ್ ರೋಬೋಟಿಕ್ಸ್ (ಸಿಎಐಆರ್) ಘಟಕದಲ್ಲಿ ಪದವಿ ಹಾಗೂ ಡಿಪ್ಲೊಮಾ ಅಪ್ರೆಂಟೀಸ್ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಅರ್ಹ, ಪ್ರತಿಭಾವಂತ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ನೇಮಕ ಮಾಡಿಕೊಳ್ಳಲಾಗುತ್ತಿರುವ ಅಪ್ರೆಂಟೀಸ್ ಸ್ಥಾನಗಳಲ್ಲಿ ಸರ್ಕಾರದ ನಿಯಮದನ್ವಯ ಅಭ್ಯರ್ಥಿಗಳಿಗೆ ಮೀಸಲಾತಿ ನಿಗದಿಯಾಗಿರುತ್ತದೆ. ಈ ತರಬೇತಿ ಅವಧಿಯು 12 ತಿಂಗಳು ಇರಲಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವೈದ್ಯಕೀಯವಾಗಿ ಫಿಟ್ ಆಗಿರುವ ಪ್ರಮಾಣಪತ್ರ ಸಲ್ಲಿಸಬೇಕು.
ಒಟ್ಟು ಸ್ಥಾನಗಳು: 34
ಸ್ಥಾನಗಳ ವಿವರ
* ಗ್ರಾಜುಯೇಟ್ ಅಪ್ರೆಂಟೀಸ್ - 33
- ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಇನ್ಫಮೇಷನ್ ಸೈನ್ಸ್ ಆಂಡ್ ಟೆಕ್ನಾಲಜಿ ಇಂಜಿನಿಯರಿಂಗ್ - 24
- ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಸ್ಟ್ರುಮೆಂಟೇಷನ್/ ಟೆಲಿಕಾಂ ಇಂಜಿನಿಯರಿಂಗ್ - 8
- ಮೆಕಾನಿಕಲ್ - 1
* ಟೆಕ್ನೀಷಿಯನ್ (ಡಿಪ್ಲೊಮಾ) ಅಪ್ರೆಂಟೀಸ್ - 1
- ಕಂಪ್ಯೂಟರ್ ಸೈನ್ಸ್/ ಇಂಜಿನಿಯರಿಂಗ್/ಕಂಪ್ಯೂಟರ್ ನೆಟ್ವರ್ಕಿಂಗ್ - 1
ಏನು ಓದಿರಬೇಕು?: ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಇನ್ಫಮೇಷನ್ ಸೈನ್ಸ್ ಆಂಡ್ ಟೆಕ್ನಾಲಜಿ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಸ್ಟ್ರುಮೆಂಟೇಷನ್/ ಟೆಲಿಕಾಂ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಪದವಿ ಹಾಗೂ ಡಿಪ್ಲೊಮಾ ಪದವಿ ಪಡೆದಿರಬೇಕು. ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಒಂದು ವರ್ಷಕ್ಕಿಂತ ಹೆಚ್ಚು ವೃತ್ತಿ ಅನುಭವ ಇರುವ ಅಭ್ಯರ್ಥಿಗಳಿಗೆ ಅವಕಾಶ ಇಲ್ಲ ಎಂದು ಸೂಚಿಸಲಾಗಿದೆ.
ವಯೋಮಿತಿ: 2021ರ ನವೆಂಬರ್ಗೆ ಅನುಗುಣವಾಗಿ ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ, ಮೀಸಲಾತಿ ಆಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋ ಸಡಿಲಿಕೆ ಇದೆ.
ಸ್ಟೈಪೆಂಡ್: ಗ್ರಾಜುಯೇಟ್ ಅಪ್ರೆಂಟೀಸ್ಗೆ ಮಾಸಿಕ 9,000 ರೂ. ಹಾಗೂ ಡಿಪ್ಲೊಮಾ ಅಪ್ರೆಂಟೀಸ್ಗೆ ಮಾಸಿಕ 8,000 ರೂ. ಗೌರವಧನ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಸೂಚನೆ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಎಂಎಚ್ಆರ್ಡಿಎನ್ಎಟಿಎಸ್ ವೆಬ್ಸೈಟ್ನಲ್ಲಿ ಹೆಸರು ನೋಂದಣಿ ಮಾಡಿಕೊಂಡಿರಬೇಕು.
ಅರ್ಜಿ ಸಲ್ಲಿಸಲು ಕೊನೇ ದಿನ: 10.12.2021
ಅಧಿಸೂಚನೆಗೆ:https://bit.ly/3nI4qOl
ಮಾಹಿತಿಗೆ:http://www.drdo.gov.in