ನಿರುದ್ಯೋಗಿಗಳಗೆ ಗುಡ್​ನ್ಯೂಸ್ ಕೊಟ್ಟ ಸಿಎಂ: ಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ

BSY E
Published on

 ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ 10 ಮಿಲಿಯನ್ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ‌ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ವಿಶ್ವ ಯುವ ಕೌಶಲ್ಯ ದಿನ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಯುವ ಜನತೆಗೆ ಶುಭಾಶಯಗಳನ್ನು ಕೋರಿದರು. ದೇಶದ ಅಭಿವೃದ್ಧಿ ಯುವ‌ಜನರ ಕೌಶಲವನ್ನು ಆಧರಿಸಿದೆ.
ವಿಶ್ವದಲ್ಲಿ ಭಾರತ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ದೇಶ, ರಾಜ್ಯದ ಅಭಿವೃದ್ಧಿಗೆ ಯುವಕರ ಕೊಡುಗೆ ಹೆಚ್ಚಿದೆ ಎಂದರು.

ಯುವಕರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಕೈಗೊಂಡಿದೆ ಎಂದರು. ಟಾಟಾ ಟೆಕ್ನಾಲಜಿ ಸಹಯೋಗದೊಂದಿದೆ ಒಡಂಬಡಿಕೆಗೆ ಸಹಿ ಮಾಡಿದೆ. ಸರ್ಕಾರಿ ಸಂಸ್ಥೆಗಳ ಮೂಲಕ ತಾಂತ್ರಿಕ ತರಬೇತಿ ನೀಡುವ ಕಾರ್ಯಕ್ರಮ ಇದೆ. ಬೀದಿ ಬದಿ ವ್ಯಾಪರಿಗಳಿಗೆ ಪ್ರಧಾನಿ ಯೋಜನೆಯಡಿ 10 ಸಾವಿರ ಸಾಲದ ರೂಪದಲ್ಲಿ ನೀಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net