ದಾವಣಗೆರೆ ವಿಶ್ವವಿದ್ಯಾಲಯದಲ್ಲಿವೆ ಬೋಧಕೇತರ ಹುದ್ದೆಗಳು: ಅರ್ಜಿ ಆಹ್ವಾನ- ಲಕ್ಷ ರೂ.ವರೆಗೆ ಸಂಬಳ

dvg
Published on

ದಾವಣಗೆರೆ ವಿಶ್ವವಿದ್ಯಾಲಯದಲ್ಲಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಮಿಕ್ಕುಳಿದ ವೃಂದದ ಒಟ್ಟು 10 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆ ವಿವರ

* ಸಹಾಯಕ ಕುಲಸಚಿವ - 2

ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ.55 ಅಂಕದೊಂದಿಗೆ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಡ್ಮಿನಿಸ್ಟ್ರೆಟಿವ್​ ಕೆಲಸದಲ್ಲಿ ವೃತ್ತಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಮಾಸಿಕ 52,650 - 97,100 ರೂ. ವೇತನ ನಿಗದಿಪಡಿಸಿದ್ದು, ಈ ಹುದ್ದೆಗಳಲ್ಲಿ ಮೀಸಲಾತಿ ಇರುವುದಿಲ್ಲ. ಮೆರಿಟ್​ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

* ಕಚೇರಿ ಅಧೀಕ್ಷಕ - 2

ಯಾವುದೇ ಪದವಿಯನ್ನು ದ್ವೀತಿಯದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಬೇಸಿಕ್​ ಕಂಪ್ಯೂಟ್​ ಜ್ಞಾನ ಇರಬೇಕು. ವೃತ್ತಿ ಅನುಭವ ಇರುವವರಿಗೆ ಆದ್ಯತೆ ಇದೆ. ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದ ಎರಡರಲ್ಲೂ ಮೀಸಲಾತಿ ಇರುವುದಿಲ್ಲ. ಮೆರಿಟ್​ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಮಾಸಿಕ 43,100 ರೂ. ನಿಂದ 83,900 ರೂ. ವೇತನ ಇದೆ.

* ಪ್ರಥಮ ದರ್ಜೆ ಸಹಾಯಕ - 6

ಯಾವುದೇ ಪದವಿ ಪಡೆದಿದ್ದು, ಕಂಪ್ಯೂಟರ್​ ಜ್ಞಾನ ಹೊಂದಿರಬೇಕು. ಯಾವುದೇ ವೃತ್ತಿ ಅನುಭವ ಕೇಳಲಾಗಿಲ್ಲ. ಮಾಸಿಕ 30,350 - 58,250 ರೂ. ವೇತನ ನಿಗದಿಪಡಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ ಮೀಸಲಾತಿ ಇಲ್ಲ. ಮಿಕ್ಕುಳಿದ ವೃಂದದ 5 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 2 ಸ್ಥಾನ, ಎಸ್ಸಿಗೆ1, ಎಸ್ಟಿಗೆ 1, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗೆ 1 ಸ್ಥಾನ ಮೀಸಲಿರಿಸಲಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಕೆ ಕೊನೇ ದಿನಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1,000 ರೂ. ಶುಲ್ಕ ನಿಗದಿಪಡಿಸಿದ್ದು, ಎಸ್ಸಿ, ಎಸ್ಟಿ ಮತ್ತು ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ಶೇ.50 ವಿನಾಯಿತಿ ಇದೆ. ಅಂಗವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಡಿಡಿ ರೂಪದಲ್ಲಿ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೇ ದಿನ: 18.10.2022

ಅರ್ಜಿ ಸಲ್ಲಿಕೆ ವಿಳಾಸ: ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ - 577007

ಅಧಿಸೂಚನೆಗೆ: https://bit.ly/3SnKw80

ಮಾಹಿತಿಗೆ: http://www.drdo.gov.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net